Wednesday, July 29, 2026
spot_imgspot_img
spot_imgspot_img

ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ: ಗಣ್ಯರಿಂದ ಸ್ವಾಗತ

- Advertisement -
- Advertisement -

ಬೆಳಗಾವಿ: ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರನ್ನು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರ ಜತೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ಬರಮಾಡಿಕೊಳ್ಳಲಾಯಿತು. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಗಣ್ಯರನ್ನು ಸ್ವಾಗತಿಸಿದರು.


ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ್ ಪಾಟೀಲ, ಮಹೇಶ್ ಕುಮಠಳ್ಳಿ, ಅನಿಲ್ ಬೆನಕೆ, ಮಹಾದೇವಪ್ಪ ಯಾದವಾಡ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿಶೇಷ ವಿಮಾನದಲ್ಲಿ ಆಗಮಿಸಿದ ಕೇಂದ್ರ ಸಚಿವ ಅಮಿತ್ ಶಾ ರವರು ನಂತರ ಬೆಳಗಾವಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆಗೆ ತೆರಳಿದರು.

- Advertisement -

Related news

error: Content is protected !!