Wednesday, May 22, 2024
spot_imgspot_img
spot_imgspot_img

ಬೆಳ್ತಂಗಡಿ: ಅಕ್ರಮ ಗೋ ಮಾಂಸ ಅಡ್ಡೆಗೆ ಪೊಲೀಸರ ದಾಳಿ; ಮೂವರು ವಶಕ್ಕೆ

- Advertisement -G L Acharya panikkar
- Advertisement -

ಬೆಳ್ತಂಗಡಿ: ಅಕ್ರಮವಾಗಿ ಗೋ ಮಾಂಸ ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಮದ್ದಡ್ಕ ಬಳಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕದ ಅನಿಲ ಎಂಬಲ್ಲಿಯ ಮನೆಯೊಂದರಲ್ಲಿ ಗೋ ವಧೆ ಮಾಡಿ ಅಕ್ರಮವಾಗಿ ಮಾಂಸ ತಯಾರಿಸುತ್ತಿರುವ ಬಗ್ಗೆ ಸ್ಥಳೀಯರಿಂದ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ಲಭಿಸಿದ್ದು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ರಾತ್ರಿ ವೇಳೆ ದಾಳಿ ನಡೆಸಿ ಸುಮಾರು 55 ಕೆಜಿ ಯಷ್ಟು ಗೋ ಮಾಂಸ ಹಾಗೂ ಮಾಂಸ ತಯಾರಿಸುತಿದ್ದ ಸೊತ್ತುಗಳು ಸೇರಿದಂತೆ ಆರೋಪಿಗಳನ್ನು ಬಂಧಿಸಿದ್ದಾರೆ.

ಹಮೀದ್ , ಇಸ್ಮಾಯಿಲ್ ಮತ್ತು ಹಾರಿಸ್ ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ. ಇವರ ವಿರುದ್ಧ ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣ ಅಧಿನಿಯಮದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!