Thursday, July 23, 2026
spot_imgspot_img
spot_imgspot_img

ಬೆಳ್ತಂಗಡಿ: ಅಜ್ಜಿಯನ್ನು ಕೊಲೆಗೈದು ಚಿನ್ನಾಭರಣ ದರೋಡೆ

- Advertisement -
- Advertisement -

ಬೆಳ್ತಂಗಡಿ: ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಮಾರಾಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿರುವ ಘಟನೆ ಬೆಳಾಲಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಪಿಜಕ್ಕಳ ಬಳಿಯ ಅಕ್ಕು(80) ಎಂಬವರು ಒಬ್ಬಂಟಿಯಾಗಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಅಜ್ಜಿಯ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ.

ಬಳಿಕ ಅಜ್ಜಿಯ ಕೋಣೆಯಲ್ಲಿದ್ದ ಚಿನ್ನಾಭರಣ ಹಾಗೂ ಮನೆಯಲ್ಲಿದ್ದ 20,000 ಹಣ ದರೋಡೆ ಮಾಡಿದ್ದಾರೆ. ಮಾಹಿತಿ ತಿಳಿದ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್‌ಐ ಕೃಷ್ಣಕಾಂತ್ ಪಾಟೀಲ್ ಮತ್ತು ತಂಡ ಸ್ಥಳಕ್ಕೆ ದೌಡಾಯಿಸಿದ್ದಾರೆ, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!