Saturday, April 27, 2024
spot_imgspot_img
spot_imgspot_img

ಬೆಳ್ತಂಗಡಿ: ಅನಾರು ಹಿ.ಪ್ರಾ.ಶಾಲೆಯ ಆವರಣದೊಳಗೆ ನುಗ್ಗಿದ ಕಿಡಿಗೇಡಿಗಳು; ಶಾಲಾ ಸ್ವತ್ತುಗಳನ್ನು ದ್ವಂಸಗೊಳಿಸಿದ ದುಷ್ಕರ್ಮಿಗಳು!!

- Advertisement -G L Acharya panikkar
- Advertisement -
vtv vitla
vtv vitla

ಪಟ್ರಮೆ: ಅನಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದೊಳಗೆ ಕಿಡಿಗೇಡಿಗಳು ನುಗ್ಗಿ, ಶಾಲಾ ಸ್ವತ್ತುಗಳನ್ನು ದ್ವಂಸಗೊಳಿಸಿದ ಘಟನೆ ಡಿ.20ರಂದು ಪಟ್ರಮೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

vtv vitla

ಈ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಶಾಲೆಯ ಆವರಣದೊಳಗೆ ನುಗ್ಗಿದ ಕಿಡಿಗೇಡಿಗಳು ನಲಿಕಲಿ ತರಗತಿಯ ಕಲಿಕಾ ಸಾಮಾಗ್ರಿಗಳನ್ನು ಹಾಗೂ ಕಿಟಕಿಯ ಗಾಜುಗಳನ್ನು ಪುಡಿಗೈದು, ಶಾಲಾ ನೋಟೀಸು ಬೋರ್ಡನ್ನೂ ದ್ವಂಸಗೊಳಿಸಿದ್ದಾರೆ.

ಶಾಲೆಗೆ ನೀರು ಸರಬರಾಜು ಮಾಡುವ ಪೈಪ್ ಗಳನ್ನು ಕತ್ತರಿಸಿ ವಿಕೃತಿ ಮೆರೆದಿದ್ದಲ್ಲದೆ ಶಾಲಾ ಕೈತೋಟಕ್ಕೆ ಅಳವಡಿಸಲಾದ ಕಬ್ಬಿಣದ ಬೇಲಿಯನ್ನೂ ಮುರಿದು, ನೀರಿನ ಟ್ಯಾಂಕ್ ನ ಮುಚ್ಚಳವನ್ನೂ ತೆರೆದಿಟ್ಟು ಹೋಗಿದ್ದಾರೆ. ಬೆಳಿಗ್ಗೆ ಶಾಲೆಯ ಶಿಕ್ಷಕರು, ಹಾಗೂ ವಿದ್ಯಾರ್ಥಿಗಳು ಶಾಲೆಗೆ ಬಂದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಇನ್ನು ಘಟನೆಯ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್ ಹಾಗೂ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!