Sunday, June 7, 2026
spot_imgspot_img
spot_imgspot_img

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧನ!

- Advertisement -
- Advertisement -

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಓಡಿಲ್ನಾಳ ಗ್ರಾಮದ ದಿಲೀಪ್ ಎನ್ನಲಾಗಿದೆ.

ಇಲ್ಲಿಯ ಸರಕಾರಿ ಶಾಲೆಯೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯೊಂದಿಗೆ ಈತ ಸಲುಗೆಯನ್ನು ಬೆಳೆಸಿಕೊಂಡಿದ್ದು, ಆನ್ ಲೈನ್ ಶಿಕ್ಷಣಕ್ಕೆಂದು ಆಕೆ ಉಪಯೋಗಿಸುತ್ತಿದ್ದ ಮೊಬೈಲ್ ಸಂಖ್ಯೆಯನ್ನು ಪಡೆದುಕೊಂಡಿದ್ದನು.

ಬಳಿಕ ಆಕೆಗೆ ಅಶ್ಲೀಲ ಸಂದೇಶಗಳನ್ನು ಹಾಗೂ ಅಶ್ಲೀಲ ವೀಡಿಯೋಗಳನ್ನು ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬುವುದಾಗಿ ಬಾಲಕಿಯ ಮನೆಯವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿನ್ನು ಬಂಧಿಸಿದ್ದು, ಆತನ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!