Saturday, July 5, 2025
spot_imgspot_img
spot_imgspot_img

ಬೆಳ್ತಂಗಡಿ: ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ; ಮೂವರು ಆರೋಪಿಗಳ ಬಂಧನ..!

- Advertisement -
- Advertisement -

ಬೆಳ್ತಂಗಡಿ : ಉಜಿರೆಯ ಗುರಿಪಳ್ಳದಲ್ಲಿ ಜಾಗದ ವಿಚಾರದಲ್ಲಿ ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಾಂಕ 21/04/2022 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 143,147,148,323,324,504,354,354(B), 506 ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಹಲ್ಲೆ ಮಾಡಿ, ಬಟ್ಟೆ ಎಳೆದಾಡಿ, ಮಾನ ಹಾನಿ ಮಾಡಿದ ಮೂರು ಜನ ಮಹಿಳಾ ಆರೋಪಿಗಳಾದ ಸುಗುಣ, ಕುಸುಮ, ಲಲಿತಾ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಲಯವು ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿದೆ.

ಪರಾರಿಯಾಗಿರುವ ಉಳಿದ ಆರೋಪಿಗಳನ್ನು ಬಂಧಿಸಲು ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!