Sunday, June 14, 2026
spot_imgspot_img
spot_imgspot_img

ಬೆಳ್ತಂಗಡಿ: ಕಾಲೇಜಿನ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು..!!

- Advertisement -
- Advertisement -

ಬೆಳ್ತಂಗಡಿ: ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್‌ಗೆ ಬಂದಿದ್ದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆಬೆಳ್ತಂಗಡಿ ತಾಲೂಕಿನ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ವಿದ್ಯಾನಗರ ಎರಡನೇ ಅಡ್ಡ ರಸ್ತೆಯ ನಿವಾಸಿ ಸನಾವುಲ್ಲ ಮತ್ತು ಸೀಮಾ ಪರ್ವಿನ್ ದಂಪತಿಗಳ ಪುತ್ರಿ ಉಮೆ ಉಜ್ಮಾ ಎಸ್. (19 ವ) ಮೃತ ವಿದ್ಯಾರ್ಥಿನಿ. ಇವರು ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದಲ್ಲಿರುವ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಹಾಸ್ಟೆಲಿನಲ್ಲಿ ಉಳಿದುಕೊಂಡಿದ್ದರು.

ವಿದ್ಯಾರ್ಥಿನಿಯು ಏ. 28 ರಂದು ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಆಕೆ ಉಳಿದುಕೊಂಡಿದ್ದ ಕಟ್ಟಡದ ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ಅವರನ್ನು ತಕ್ಷಣ ಆಡಳಿತ ಮಂಡಳಿಯು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಚಿಕಿತ್ಸೆ ಫಲಿಸದೆ ಬೆಳಗ್ಗೆ 9 ಗಂಟೆಗೆ ವಿದ್ಯಾರ್ಥಿನಿ ಉಮೆ ಉಜ್ಮಾ ರವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ವಿದ್ಯಾರ್ಥಿನಿಯ ತಂದೆ ಸನಾವುಲ್ಲರವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆಯ ಬಳಿಕವಷ್ಟೇ ಸಾವಿಗೆ ಸೂಕ್ತ ಕಾರಣ ತಿಳಿದುಬರಬೇಕಾಗಿದೆ.

- Advertisement -

Related news

error: Content is protected !!