Thursday, June 18, 2026
spot_imgspot_img
spot_imgspot_img

ಬೆಳ್ತಂಗಡಿ: ಕುತ್ತಿಗೆಗೆ ವಿದ್ಯುತ್ ತಂತಿ ಸಿಲುಕಿ ರಸ್ತೆಗೆಸೆಯಲ್ಪಟ್ಟು ಸವಾರ ಸಾವು.!

- Advertisement -
- Advertisement -

suvarna gold
vtv vitla

ಬೆಳ್ತಂಗಡಿ: ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದಲ್ಲಿ ಸಾಗುತ್ತಿರುವಾಗ ವಿದ್ಯುತ್ ತಂತಿ ಕುತ್ತಿಗೆಗೆ ಸಿಲುಕಿ ರಸ್ತೆಗೆಸೆಯಲ್ಪಟ್ಟು ದಾರುಣವಾಗಿ ಮೃತಪಟ್ಟ ಘಟನೆ ಕಾಜೂರು ದಿಡುಪೆ ಸಂಸೆ ರಸ್ತೆಯ ಹೇಡ್ಯ ಸೊಸೈಟಿ ಬಳಿ ಗುರುವಾರ ತಡರಾತ್ರಿ ನಡೆದಿದೆ. ಮೃತರನ್ನು ಕೊಯ್ಯುರು ನಿವಾಸಿ ರಘು ಎಂದು ಗುರುತಿಸಲಾಗಿದೆ.

ಹೇಡ್ಯ ಸೊಸೈಟಿ ಬಳಿ ರಾತ್ರಿ ಸಂದರ್ಭ ಹುಲ್ಲು ಸಾಗಾಟದ ಪಿಕಪ್ ವಾಹನ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿತ್ತು, ಇದರಿಂದಾಗಿ ನಾಲ್ಕೈದು ವಿದ್ಯುತ್ ಕಂಬಗಳು ರಸ್ತೆಗೆ ಬಿದ್ದಿದ್ದು, ಅದರ ತಂತಿಗಳು ರಸ್ತೆಯಲ್ಲಿ ನೇತಾಡುತ್ತಿದ್ದವು, ಮೃತ ರಘು ಅವರು ರಾತ್ರಿ 11 ಗಂಟೆ ವೇಳೆಗೆ ಬೈಕ್ ನಲ್ಲಿ ಹೇಡ್ಯ ಸೊಸೈಟಿ ಬಳಿ ಸಂಚರಿಸುತ್ತಿದ್ದ ಸಂದರ್ಭ ಅವರ ಕುತ್ತಿಗೆಗೆ ತಂತಿಗಳು ಸಿಕ್ಕಿಕೊಂಡು ರಸ್ತೆಗೆಸೆಯಲ್ಪಟ್ಟಿದ್ದಾರೆ.

ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತದ ವೇಳೆ ತಂತಿಯಲ್ಲಿ ವಿದ್ಯುತ್ ಪ್ರವಹಿಸುತ್ತಿತ್ತೇ ಎಂಬ ಬಗ್ಗೆ ಮಾಹಿತಿ ಲಭಿಸಿಲ್ಲ.

- Advertisement -

Related news

error: Content is protected !!