Sunday, June 14, 2026
spot_imgspot_img
spot_imgspot_img

ಬೆಳ್ತಂಗಡಿ : ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಬೆಳ್ತಂಗಡಿ : ಕೊಲೆ ಪ್ರಕರಣವೊಂದರಲ್ಲಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಗೊಂಡು ನಂತರ ಕೋರ್ಟ್‌‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿ ಸ್ನೇಹಿತನನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಬಂಧನವಾಗಿತ್ತು. ನಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದು ಕಳೆದ ಒಂದು ವರ್ಷದಿಂದ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ A2 ಕೇರಳ ರಾಜ್ಯದ ಉಪ್ಪಳ ಕಾಸರಗೋಡು ಜಿಲ್ಲೆಯ ಮೊಳಿಂಜೆ ಗ್ರಾಮದ ಮಾಹಿ ನಗರದ ಇಸುಬು ಎಂಬವರ ಮಗನಾದ ಸಿರಾಜ್(28) ಎಂಬಾತನನ್ನು ಫೆ.7 ರಂದು ಆತನ ಮನೆಯ ಸಮೀಪದಿಂದ ಬೆಳ್ತಂಗಡಿ ಪೊಲೀಸ್‌ ಇನ್ಸ್‌ಪೆಕ್ಟ‌ರ್‍ ಸತ್ಯನಾರಾಯಣ .ಕೆ ಹಾಗೂ ಸಬ್‌ ಇನ್ಸ್‌ಪೆಕ್ಟರ್ ಅರ್ಜುನ್ ರವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ವೃಷಭ, ಬಸವರಾಜ್‌ ರವರು ಬಂಧಿಸಿದ್ದಾರೆ

- Advertisement -

Related news

error: Content is protected !!