Monday, June 15, 2026
spot_imgspot_img
spot_imgspot_img

ಬೆಳ್ತಂಗಡಿ: ದಲಿತ ವ್ಯಕ್ತಿಯ ಕೊಲೆ ಪ್ರಕರಣ – ಆರೋಪಿ ಬಜರಂಗದಳ ಕಾರ್ಯಕರ್ತ ಪೊಲೀಸ್ ವಶಕ್ಕೆ

- Advertisement -
- Advertisement -

ಬೆಳ್ತಂಗಡಿ: ಕನ್ಯಾಡಿಯ ದಲಿತ ವ್ಯಕ್ತಿ ದಿನೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಬೆಂಬಲಿಗ ಕಿಟ್ಟಿ ಅಲಿಯಾಸ್ ಕೃಷ್ಣನನ್ನು ಧರ್ಮಸ್ಥಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬುಧವಾರ ಬೆಳಿಗ್ಗೆ 11 ಗಂಟೆಗೆ ಕನ್ಯಾಡಿಯ ದಿನೇಶ್ ಅವರ ಅಂಗಡಿ ಬಳಿ ಬಂದ ಆರೋಪಿ ಕೃಷ್ಣ, ಜಾಗದ ತಕರಾರಿಗೆ ಸಂಬಂಧಪಟ್ಟಂತೆ ಹಲ್ಲೆ ನಡೆಸಿದ್ದು, ಬಳಿಕ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಿದ್ದ ಕೃಷ್ಣ, ‘ಈತ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾನೆ’ ಎಂದು ವೈದ್ಯರ ಬಳಿ ಹೇಳಿದ್ದ.

ಆದರೆ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಿನೇಶ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು. ತನ್ನ ಪುತ್ರನಿಗೆ ಹಲ್ಲೆ ನಡೆಸಿದ್ದಾರೆ ಎಂದು ಮೃತರ ತಾಯಿ ಪದ್ಮಾವತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಧರ್ಮಸ್ಥಳ ಪೊಲೀಸರು ಆರೋಪಿ ಕೃಷ್ಣನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!