Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ದಾರಿ ಹೋಕರನ್ನು ಹಿಡಿದು ಥಳಿಸುತ್ತಿದ್ದ ಮಾನಸಿಕ ಅಸ್ವಸ್ಥ..!

- Advertisement -
- Advertisement -
vtv vitla

ಬೆಳ್ತಂಗಡಿ: ನಗರದ ಸಂತೆ ಕಟ್ಟೆಯಲ್ಲಿ ಮಾನಸಿಕ ಅಸ್ವಸ್ಥನೊಬ್ವ ಕಂಡಕಂಡವರ ಮೇಲೆ ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ.

ಯಾವುದೇ ಕಾರಣವಿಲ್ಲದೇ ದಾರಿ ಹೋಕರ ಮೇಲೆ ಈತ ಏಕಾಏಕಿ ಹಲ್ಲೆ ನಡೆಸಿದ್ದು ಹಲವರು ಮಂದಿ ಈತನಿಂದ ಹಲ್ಲೆಗೆ ಒಳಗಾಗಿದ್ದಾರೆ. ಕೂಡಲೇ ಸ್ಥಳೀಯರು ಈತನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಈತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸುವ ಕಾರ್ಯ ಮಾಡಿದ್ದಾರೆ.

ಈತ ತನ್ನ ವಿಳಾಸವನ್ನು ಆಗಾಗ ಬೇರೆ ಬೇರೆಯಾಗಿ ಹೇಳುತ್ತಿದ್ದು ಇದರಿಂದಾಗಿ ಈತನ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

- Advertisement -

Related news

error: Content is protected !!