Thursday, April 25, 2024
spot_imgspot_img
spot_imgspot_img

ಬೆಳ್ತಂಗಡಿ: ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ..!!

- Advertisement -G L Acharya panikkar
- Advertisement -

ಬೆಳ್ತಂಗಡಿ: ನವ ವಿವಾಹಿತೆ ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಇಂದಬೆಟ್ಟುವಿನಲ್ಲಿ ನಡೆದಿದೆ.

ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ದೇವಕಿಯವರ ಪುತ್ರಿ ಕೌಶಲ್ಯ(27) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಎರಡು ದಿನಗಳ ಹಿಂದೆ ವಿಷ ಸೇವಿಸಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!