Wednesday, June 17, 2026
spot_imgspot_img
spot_imgspot_img

ಬೆಳ್ತಂಗಡಿ : ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಸ್ಥಳೀಯರಿಂದ ರಕ್ಷಣೆ

- Advertisement -
- Advertisement -

ಬೆಳ್ತಂಗಡಿ: ವ್ಯಕ್ತಿಯೊಬ್ಬರು ನೇತ್ರಾವತಿ ಸೇತುವೆ ಮೇಲಿನಿಂದ ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧರ್ಮಸ್ಥಳ ಕನ್ಯಾಡಿ ಸಮೀಪ ನಡೆದಿದೆ. ಮೈಸೂರಿನ ಮಂಜು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾರೆ.

ಮಂಜು ಅವರು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ಮನೆಯವರೊಂದಿಗೆ ಗಲಾಟೆ ಮಾಡಿ ಮಾನಸಿಕವಾಗಿ ನೊಂದು ಕನ್ಯಾಡಿಗೆ ಆಗಮಿಸಿ ಕೂಲಿ ಕೆಲಸಕ್ಕೆ ಸೇರಿದ್ದರು ಎಂದು ತಿಳಿದುಬಂದಿದೆ.

ಆದ್ರೆ ಜ.24ರಂದು ಸಂಜೆ ನೇತ್ರಾವತಿ ಸೇತುವೆ ಮೇಲಿನಿಂದ ನದಿಗೆ ಹಾರಿದ್ದನ್ನು ಗಮನಿಸಿದ ಸ್ಥಳೀಯರು ಮಂಜು ಅವರನ್ನು ರಕ್ಷಿಸಿದ್ದಾರೆ. ಅವರ ಕೈ-ಕಾಲಿಗೆ ಗಾಯವಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!