Friday, May 3, 2024
spot_imgspot_img
spot_imgspot_img

ಬೆಳ್ತಂಗಡಿ: ಪೇಟೆಗೆ ಹೋದ ಮಹಿಳೆ ನಾಪತ್ತೆ; ಸುಳಿವು ಸಿಕ್ಕಲ್ಲಿ ಮಾಹಿತಿ ನೀಡುವಂತೆ ಮನವಿ

- Advertisement -G L Acharya panikkar
- Advertisement -
vtv vitla

ಬೆಳ್ತಂಗಡಿ: ಮೊಬೈಲ್‌ ಸಿಮ್‌ ಕಾರ್ಡ್‌ ತರುವುದಾಗಿ ಹೇಳಿ ಹೋದ ಮಹಿಳೆ ವಾಪಾಸ್‌ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ.

ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ಬಂಗಟ ಮನೆ ನಿವಾಸಿ ಜೋನ್ ಮೋನಿಸ್ ರವರ ಪತ್ನಿ ಪ್ರಿಯಾ ಟಿ.ಎಂ (37ವ) ರವರು ಡಿ.22ರಂದು ಮಧ್ಯಾಹ್ನ ಸುಮಾರು 2.00 ಗಂಟೆಗೆ ಮನೆಯಿಂದ ಮಡಂತ್ಯಾರಿಗೆ ಹೋಗಿ ಮೊಬೈಲ್ ಸಿಮ್ ಕಾರ್ಡ್ ತರುವುದಾಗಿ ಹೇಳಿ ಹೋದವರು ವಾಪಾಸು ಮನೆಗೆ ಬಾರದೇ ಕಾಣೆಯಾಗಿದ್ದಾರೆ.

ಅವರ ಬಳಿ ಇದ್ದ ಎರಡು ಮೊಬೈಲ್ ನಂಬರ್‌ಗಳು ಸ್ವಿಚ್ ಆಫ್ ಆಗಿದ್ದು, ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗದೇ ಇದ್ದುದರಿಂದ ಅವರ ಪತಿ ಜೋನ್ ಮೋನಿಸ್ ಎಂಬವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.

ಪ್ರಿಯಾ ಟಿ.ಎಂ ರವರು ಮನೆಯಿಂದ ಹೊರಟ ವೇಳೆ ನೀಲಿ ಬಣ್ಣ ಬಿಳಿ ಹೂಗಳಿರುವ ಚೂಡಿದಾರ ಟಾಪ್ ಮತ್ತು ನೀಲಿ ಬಣ್ಣ ಲೆಗ್ಗಿನ್ ಪ್ಯಾಂಟ್ ಧರಿಸಿದ್ದು, ಇವರು ಸುಮಾರು 5 ಅಡಿ 2 ಇಂಚು ಉದ್ದವಿದ್ದು, ಸಾಧಾರಣ ಮೈಕಟ್ಟು ಹೊಂದಿದ್ದು, ಬೂದು ಮೈಬಣ್ಣವನ್ನು ಹೊಂದಿದ್ದಾರೆ. ಇವರು ಕನ್ನಡ, ಮಲೆಯಾಳಿ, ಕೊಂಕಣಿ ಮತ್ತು ತುಳು ಭಾಷೆ ಮಾತನಾಡುತ್ತಾರೆ.

ಇವರ ಇರುವಿಕೆ ಬಗ್ಗೆ ಎಲ್ಲಿಯಾದರೂ ಮಾಹಿತಿ ಸಿಕ್ಕಲ್ಲಿ ಕೂಡಲೆ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರ ಮೊಬೈಲ್ ನಂಬ್ರ: 9480805370 ಮತ್ತು ಬೆಳ್ತಂಗಡಿ ಪೊಲೀಸ್ ಠಾಣಾ ದೂರವಾಣಿ ಸಂಖ್ಯೆ: 08256-232093 ಕ್ಕೆ ತಿಳಿಸುವಂತೆ ಕೋರಲಾಗಿದೆ.

- Advertisement -

Related news

error: Content is protected !!