Monday, April 29, 2024
spot_imgspot_img
spot_imgspot_img

ಬೆಳ್ತಂಗಡಿ: ಬಿದ್ದು ಗಾಯಗೊಂಡ ಬಾಲಕನಿಗೆ ಚಿಕಿತ್ಸೆ ನೀಡದೇ ಶಿಕ್ಷಕರ ನಿರ್ಲಕ್ಷ್ಯ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌

- Advertisement -G L Acharya panikkar
- Advertisement -

ಬೆಳ್ತಂಗಡಿ: ಶಾಲೆಯಲ್ಲಿ ಆಟವಾಡುವ ವೇಳೆ ಬಾಲಕನೋರ್ವ ಬಿದ್ದು ತಲೆ ಹಿಂಬದಿ ಏಟಾಗಿ ರಕ್ತ ಬರುತ್ತಿದ್ದರು ಶಾಲಾ ಶಿಕ್ಷಕರು ಆಸ್ಪತ್ರೆಗೆ ಕರೆದೊಯ್ಯದೆ ವಿದ್ಯಾರ್ಥಿಗಳಿಂದ ಪ್ರಥಮ ಚಿಕಿತ್ಸೆ ನೀಡಿ ಅಮಾನವಿಯ ಘಟನೆ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಆಟ ಆಡುವ ಸಮಯ ನಾಲ್ಕನೇ ತರಗತಿ ವಿದ್ಯಾರ್ಥಿಯೋರ್ವ ಬಿದ್ದು ತಲೆಗೆ ಏಟಾಗಿತ್ತು ಶಿಕ್ಷಕರು ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ಬದಲಾಗಿ ಮಕ್ಕಳಿಂದಲೇ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ತಡವಾಗಿ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗೆ ಶಿಕ್ಷಕರು ಪ್ರಥಮ ಚಿಕಿತ್ಸೆ ನೀಡಲು ಮುಂದಾಗದೆ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಕ್ಕಳೇ ಪ್ರಥಮ ಚಿಕಿತ್ಸೆ ನೀಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಶಾಲಾಭಿವೃದ್ಧಿ ಸಮಿತಿ ಹಾಗೂ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಶನಿವಾರ ಸಭೆ ನಡೆಸಿ ಮುಂದೆ ಇಂತಹ ಘಟನೆ ಮರುಕಳಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅಲ್ಲಿನ ಶಿಕ್ಷಕರು ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ಪಡೆದಿದ್ದೇನೆ. ಮಗು ಆರೋಗ್ಯವಾಗಿದೆ. ಸಿ.ಆರ್‌.ಪಿ.ಗಳು ಶಾಲೆಗೆ ಭೇಟಿ ನೀಡಿದ್ದಾರೆ. ಶಿಕ್ಷಕರು ಈ ರೀತಿ ವರ್ತಿಸಬಾರದಿತ್ತು. ಸೋಮವಾರ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಎಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಎಸ್‌. ವಿರೂಪಾಕ್ಷಪ್ಪ ಅವರು ಹೇಳಿದ್ದಾರೆ.

- Advertisement -

Related news

error: Content is protected !!