Friday, May 10, 2024
spot_imgspot_img
spot_imgspot_img

ಬೆಳ್ತಂಗಡಿ: ಬೈಕ್‌ಗೆ ಲಾರಿ ಡಿಕ್ಕಿ; ಸವಾರ ಮೃತ್ಯು, ಮತ್ತೋರ್ವ ಗಂಭೀರ

- Advertisement -G L Acharya panikkar
- Advertisement -
vtv vitla

ಬೆಳ್ತಂಗಡಿ: ಬೈಕ್ ಹಾಗೂ ಲಾರಿ ನಡುವೆ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟ ಘಟನೆ ಧರ್ಮಸ್ಥಳ ಸಮೀಪದ ಮುಂಡ್ರುಪ್ಪಾಡಿ ಎಂಬಲ್ಲಿ‌ ನಡೆದಿದೆ.

ಮೃತ ಯುವಕನನ್ನು ಗುರುವಾಯನಕೆರೆ ನಿವಾಸಿ ಚೈನರ್ ಅಗಿರುವ ಪ್ರಸಾದ್ ಶೆಟ್ಟಿ(27) ಎನ್ನಲಾಗಿದೆ.

ಬೆಳ್ತಂಗಡಿ ಸರ್ವೆ ಇಲಾಖೆಯ ಸರ್ವೆ ಇದ್ದ ಕಾರಣ ಕರ್ತವ್ಯ ಮುಗಿಸಿ ವಾಪಾಸ್ಸು ಆಗುವ ವೇಳೆ ಮುಂಡ್ರುಪಾಡಿಯಲ್ಲಿ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು ಈ ವೇಳೆ ಬೈಕ್ ನಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಈ ಪೈಕಿ ಪ್ರಸಾದ್ ಮೃತಪಟ್ಟಿದ್ದಾನೆ. ಮತ್ತೋರ್ವ ಸವಾರ ವಿಶ್ವನಾಥ್ ನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಕುರಿತಂತೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

- Advertisement -

Related news

error: Content is protected !!