Thursday, July 3, 2025
spot_imgspot_img
spot_imgspot_img

ಬೆಳ್ತಂಗಡಿ: ಬೈಕ್, ಆಟೋ ರಿಕ್ಷಾ, ಲಾರಿ ನಡುವೆ ಸರಣಿ ಅಪಘಾತ; ಕಾಲೇಜು ವಿದ್ಯಾರ್ಥಿ ಮೃತ್ಯು

- Advertisement -
- Advertisement -

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿಯೊಬ್ಬ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಡಂತ್ಯಾರಿನಲ್ಲಿ ನಡೆದಿದೆ.

ಮಡಂತ್ಯಾರು ಸೆಕ್ರೆಡ್ ಹಾರ್ಟ್ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಕೊಡ್ಲಕ್ಕಿ ನಿವಾಸಿ ಹರೀಶ್ಚಂದ್ರ ಎಂಬವರ ಪುತ್ರ ಹರ್ಷಿತ್(20) ಸಂಜೆ ಕಾಲೇಜು ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿರುವ ಸಂದರ್ಭ ಬಳ್ಳಮಂಜ ರಸ್ತೆಯ ಬಂಗೇರಕಟ್ಟೆ ಎಂಬಲ್ಲಿ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿದ್ದು, ಈ ವೇಳೆ ಲಾರಿ ಅಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಿದ್ದರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ಅಪಘಾತ ಪ್ರಕರಣ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡು ದಿನದಲ್ಲಿ ಒಂದೆ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಅಪಘಾತವಾಗಿ ಸಾವನ್ನಪ್ಪಿರುವ ವಿಚಾರ ಎಲ್ಲರನ್ನೂ ಚಿಂತೆಗೊಳಪಡಿಸಿದೆ. ಮಕ್ಕಳಿಗೆ ವಾಹನ ನೀಡುವಾಗ ಪೋಷಕರು ಎಚ್ಚರ ವಹಿಸಬೇಕು ಎಂಬುವುದೇ ಎಲ್ಲರ ಆಗ್ರಹವಾಗಿದೆ.

- Advertisement -

Related news

error: Content is protected !!