- Advertisement -
- Advertisement -
ಬೆಳ್ತಂಗಡಿ: ksrtc ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಏಳು ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳದ ಕುದ್ರಾಯ ಎಂಬಲ್ಲಿ ನಡೆದಿದೆ.
ಅಪಘಾತದಲ್ಲಿ ಮಂಡ್ಯ ಜಿಲ್ಲೆಯ ಚೆನ್ನಸಾಂದ್ರ ನಿವಾಸಿ ಮಾಹದೇವ(63) ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಐವರು ಮಹಿಳೆಯರು ಮಗು ಸೇರಿ ಏಳು ಮಂದಿಗೆ ಗಂಭೀರ ಗಾಯವಾಗಿದ್ದು, ಇವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಧರ್ಮಸ್ಥಳದಲ್ಲಿ ದೀಪೋತ್ಸವದ ಹಿನ್ನೆಲೆ ಮಂಡ್ಯ ಜಿಲ್ಲೆಯಿಂದ
ಒಂದೇ ಕುಟುಂಬದ ಹತ್ತು ಮಂದಿ ಆಗಮಿಸಿದ್ದರು. ಇವರು ಕುದ್ರಾಯ ಎಂಬಲ್ಲಿ ವಾಹನವನ್ನು ರಸ್ತೆಯ ಬಲಕ್ಕೆ ನಿಲ್ಲಿಸಿ ಇಳಿದು ಅಂಗಡಿಗೆ ಹೋಗುತ್ತಿದ್ದ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ ksrtc
ಬಸ್ ನಿಂತಿದ್ದವರಿಗೆ ಹಾಗೂ ಬೊಲೋರೊ ವಾಹನಕ್ಕೆ ಢಿಕ್ಕಿ ಹೊಡೆದಿದೆ.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

- Advertisement -








