Wednesday, May 15, 2024
spot_imgspot_img
spot_imgspot_img

ಬೆಳ್ತಂಗಡಿ: ಮನೆಯಂಗಳದಲ್ಲಿ ಚಿರತೆ ಪ್ರತ್ಯಕ್ಷ: ಅರಣ್ಯ ಇಲಾಖೆಯಿಂದ ಬೋನ್ ಕಾರ್ಯಾಚರಣೆ

- Advertisement -G L Acharya panikkar
- Advertisement -

ಬೆಳ್ತಂಗಡಿ: ಬಳಂಜ ಗ್ರಾಮದ ಪರಾರಿ ನಿವಾಸಿ ರಾಮಣ್ಣ ಪೂಜಾರಿ ಎಂಬುವರ ಮನೆಯ ಅಂಗಳದಲ್ಲಿ ರಾತ್ರಿ ಚಿರತೆಯೊಂದು ಅಲೆದಾಡುತ್ತಿದ್ದ ದೃಶ್ಯ ಅವರ ಮನೆಯ ಸಿಸಿ ಕ್ಯಾಮರಾದಲ್ಲಿ ಜೂ.10 ರಂದು ಸೆರೆಯಾಗಿದೆ.

ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಅರಣ್ಯ ಇಲಾಖೆಯವರು ಇದರ ಸೆರೆಗಾಗಿ ಬೋನ್ ಕಾರ್ಯಾಚರಣೆ ನಡೆಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಗ್ರಾಮದಲ್ಲಿ ನಾಯಿ, ಬೆಕ್ಕುಗಳು ಕಾಣೆಯಾಗುತ್ತಿದ್ದು ಜನ ಆತಂಕದಲ್ಲಿದ್ದರು. ಇದೀಗ ಮನೆಯಂಗಳಕ್ಕೆ ಚಿರತೆಗಳು ಬರುವುದರಿಂದ ಜನ ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ.

ಇದೇ ಜೂನ್ 2 ರಂದು ಸುಳ್ಳೇರಿ ಸಮೀಪ ನಾವರ ಗ್ರಾಮದಲ್ಲಿ ವಸಂತ ಕೋಟ್ಯಾನ್ ಎಂಬುವರ ಮನೆಯ ಹಿಂಬದಿ ಬಾವಿಗೆ ಚಿರತೆ ಬಿದ್ದಿತ್ತು. ಬಳಿಕ ಕಾರ್ಕಳ ಅರಣ್ಯ ಇಲಾಖೆ ತಂಡ ರಕ್ಷಿಸಿದ್ದರು. ಈ ಪ್ರದೇಶದಲ್ಲಿ ಆಗಾಗ ಚಿರತೆಗಳು ಪ್ರತ್ಯಕ್ಷವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಮನೆಯಂಗಳಕ್ಕೆ ಚಿರತೆ ಬಂದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಪತ್ತೆಯಾಗಿದ್ದು ಈ ಬಗ್ಗೆ ಇದರ ಸೆರೆಗಾಗಿ ಬೋನ್ ಅಳವಡಿಕೆ ಮಾಡಿದ್ದೇವೆ. ಚಿರತೆಯನ್ನು ಶೀಘ್ರವಾಗಿ ಸೆರೆ ಹಿಡಿಯಲಾಗುವುದು ಎಂದು ಅಳದಂಗಡಿ ಉಪ ವಲಯ ಅರಣ್ಯಾಧಿಕಾರಿ ಸುರೇಶ್ ತಿಳಿಸಿದ್ದಾರೆ.

- Advertisement -

Related news

error: Content is protected !!