Sunday, May 19, 2024
spot_imgspot_img
spot_imgspot_img

ಬೆಳ್ತಂಗಡಿ: ಮನೆಯಂಗಳದಲ್ಲಿ ನಿಂತಿದ್ದವರ ಮೇಲೆ ಉರುಳಿ ಬಿದ್ದ ಮರ; ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು!

- Advertisement -G L Acharya panikkar
- Advertisement -

ಬೆಳ್ತಂಗಡಿ: ಮನೆಯಂಗಳದಲ್ಲಿದ್ದ ಮರವೊಂದು ಆಕಸ್ಮಿಕವಾಗಿ ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಪುದುವೆಟ್ಟು ಎಂಬಲ್ಲಿ ಬುಧವಾರ ನಡೆದಿದೆ. ಮೃತರನ್ನು ಪುದುವೆಟ್ಟು ಗ್ರಾಮದ ಸಾಮದಕಲವು ವರಸಾರಿ ಮನೆ ನಿವಾಸಿ ಆದಂ ಸಾಹೇಬ್(61) ಎನ್ನಲಾಗಿದೆ.

ಮನೆಯ ಅಂಗಳದಲ್ಲಿ ನಿಂತುಕೊಂಡಿದ್ದ ಆದಂ ಸಾಹೇಬ್ ಅವರ ಮೇಲೆ ಆಕಸ್ಮಿಕವಾಗಿ ಮರವೊಂದು ಬೇರು ಸಮೇತ ಉರುಳಿ ಬಿದ್ದಿದೆ. ಪರಿಣಾಮ ತಲೆಗೆ ಗಂಭೀರ ಗಾಯವಾಗಿದ್ದು, ತಕ್ಷಣವೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಕರೆದೊಯ್ಯಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

driving
- Advertisement -

Related news

error: Content is protected !!