- Advertisement -
- Advertisement -





ಬೆಳ್ತಂಗಡಿ : ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ಇಂದು ನಡೆದಿದೆ.
ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್(35) ಮೃತರು.
ಮಿಯಾರ್ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ ಇವರು ಮರದ ಗೆಲ್ಲು ತೆಗೆಯುತ್ತಿದ್ದ ವೇಳೆ ಮರದಲ್ಲೇ ಅಸ್ವಸ್ಥಗೊಂಡು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಕೂಡ ಆದರೆ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಮೃತ ಪ್ರವೀಣ್ ರವರು ತಂದೆ,ತಾಯಿ,ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
- Advertisement -








