Tuesday, July 1, 2025
spot_imgspot_img
spot_imgspot_img

ಬೆಳ್ತಂಗಡಿ: ವಾಮಾಚಾರ ನಡೆಸಿ ಭೂಮಿಯನ್ನು ಅಗೆದು ನಿಧಿ ಹುಡುಕಾಟ

- Advertisement -
- Advertisement -

ಬೆಳ್ತಂಗಡಿ: ಯಾರೋ ಅಪರಿಚಿತರು ಸವಣಾಲು ಕೆರೆಕೋಡಿ ರಾಜೇಶ್ ಎಂಬವರ ಜಾಗದಲ್ಲಿ ವಾಮಾಚಾರ ನಡೆಸಿ ಭೂಮಿಯನ್ನು ಅಗೆದು ನಿಧಿ ಹುಡುಕಾಟ ನಡೆಸಿರುವ ಘಟನೆ ನಡೆದಿದೆ.

ಘಟನೆಯ ಬಗ್ಗೆ ಸ್ಥಳೀಯ ವ್ಯಕ್ತಿಯೊಬ್ಬರು ಗಮನಿಸಿ ರಾಜೇಶ್ ಅವರಿಗೆ ಮಾಹಿತಿ ನೀಡಿದ್ದಾರೆ ಅವರು ಹೋಗಿ ಪರಿಶೀಲಿಸಿದಾಗ ಬಾಟಲಿಗಳು ಕುಂಕುಮ ತೆಂಗಿನಕಾಯಿ ಸೇರಿದಂತೆ ಗಿಡವೊಂದರಲ್ಲಿ ಕುಂಕುಮ ಮಿಶ್ರಿತ ಲಿಂಬೆ ಹಣ್ಣನ್ನು ಕಟ್ಟಿದ್ದು, ಸುಮಾರು ೫ ಅಡಿ ಆಳವಾದ ಗುಂಡಿಯನ್ನು ಅಗೆದು ಹುಡುಕಾಟ ನಡೆಸಿದ ಕುರುಹುಗಳು ಕಂಡುಬಂದಿದೆ.

ನಿಧಿ ಇದೆ ಎನ್ನುವ ಸಂಶಯದಲ್ಲಿ ಯಾರೋ ಅಪರಿಚಿತರು ಈ ಕೃತ್ಯ ನಡೆಸಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು ಈ ಬಗ್ಗೆ, ಬೆಳ್ತಂಗಡಿ ಪೊಲೀಸ್ ಠಾಣೆಗೆ ರಾಜೇಶ್ ಅವರು ದೂರು ನೀಡಿದ್ದಾರೆ.

- Advertisement -

Related news

error: Content is protected !!