Sunday, June 14, 2026
spot_imgspot_img
spot_imgspot_img

ಬೆಳ್ತಂಗಡಿ: ವಿಪರೀತ ಜ್ವರದಿಂದ ಸಹೋದರಿಬ್ಬರು ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

- Advertisement -
- Advertisement -

ಬೆಳ್ತಂಗಡಿ: ಜ್ವರದಿಂದ ಬಳಲುತ್ತಿದ್ದ ಒಂದೇ ಕುಟುಂಬದ ಎರಡು ಪುಟ್ಟ ಕಂದಮ್ಮಗಳು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಮದ್ದಡ್ಕ ಗ್ರಾಮದ ಲಾಡಿ ಎಂಬಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಅಬ್ಬಾಸ್ ಎಂಬವರ ಮಕ್ಕಳಾದ ಸಫಾನ್‌ (8)ಹಾಗೂ ಸಿನಾನ್ (4) ಮೃತ ಮಕ್ಕಳು. ಮಕ್ಕಳಿಗೆ ಆರಂಭದಲ್ಲಿ ಜ್ವರ ಕಾಣಿಸಿಕೊಂಡಿದ್ದು, ಸ್ಥಳೀಯವಾಗಿ ಚಿಕಿತ್ಸೆ ಪಡೆದು ಮಕ್ಕಳು ಮನೆಯಲ್ಲಿಯೇ ಇದ್ದರು.

ಈ ನಡುವೆ ಇಬ್ಬರು ಮಕ್ಕಳಿಗೂ ಜ್ವರ ತೀವ್ರವಾಗಿದ್ದು ಬಳಿಕ ಇಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಓರ್ವ ಬಾಲಕ ನಿನ್ನೆ ಮೃತ ಪಟ್ಟಿದ್ದು ಇನ್ನೋರ್ವ ಬಾಲಕ ಇಂದು ಮೃತಪಟ್ಟಿದ್ದಾನೆ, ಮನೆಯ ಇಬ್ಬರು ಮಕ್ಕಳನ್ನೂ ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

- Advertisement -

Related news

error: Content is protected !!