Monday, June 8, 2026
spot_imgspot_img
spot_imgspot_img

ಬೆಳ್ತಂಗಡಿ: ಹಾವು ರಕ್ಷಣೆ ವೇಳೆ ಸ್ನೇಕ್ ಅಶೋಕ್‌ಗೆ ನಾಗರಹಾವು ಕಡಿತ; ಆಸ್ಪತ್ರೆಗೆ ದಾಖಲು

- Advertisement -
- Advertisement -
vtv vitla

ಬೆಳ್ತಂಗಡಿ : ಹಾವು ರಕ್ಷಣೆ ಮಾಡುವ ವೇಳೆ ನಾಗರ ಹಾವು ಕಚ್ಚಿ ಬೆಳ್ತಂಗಡಿಯ ಸ್ನೇಕ್ ಅಶೋಕ್ ಲಾಯಿಲ ಗಂಭೀರ ಗಾಯಗೊಂಡ ಘಟನೆ ನಡೆದಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬಳಿ ರಾತ್ರಿ ಸುಮಾರು 10 ಗಂಟೆ ವೇಳೆ ಮನೆಯಲ್ಲಿ ನಾಗರ ಹಾವು ಇರುವ ಬಗ್ಗೆ ಮಾಹಿತಿ ನೀಡಿದ್ದು, ಅದರಂತೆ ರಕ್ಷಣಾ ಕಾರ್ಯಾಚರಣೆಗೆ ಸ್ನೇಕ್ ಅಶೋಕ್‌ ಲಾಯಿಲ ಹೋಗಿದ್ದು, ಹಿಡಿಯುವಾಗ ಬಲ ಕಾಲಿಗೆ ನಾಗರ ಹಾವು ಕಚ್ಚಿದೆ.

ತಕ್ಷಣ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ನೇಕ್‌ ಅಶೋಕ್‌ ಲಾಯಿಲ ಗಂಭೀರ ಸ್ಥಿತಿಯಲ್ಲಿದ್ದು ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!