Thursday, May 16, 2024
spot_imgspot_img
spot_imgspot_img

ಬೆಳ್ತಂಗಡಿ: ಹಿಂದೂ ಯುವತಿಯ ಜೊತೆ ಮುಸ್ಲಿಂ ಯುವಕನ ಪ್ರಯಾಣ; ತಂಡದಿಂದ ಹಲ್ಲೆ

- Advertisement -G L Acharya panikkar
- Advertisement -

ಬೆಳ್ತಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪರಿಚಯಸ್ಥ ಯುವತಿಯೊಂದಿಗೆ ಮಾತನಾಡಿದ ಎಂಬ ಕಾರಣಕ್ಕೆ ಯುವಕನನ್ನು ತಂಡವೊಂದು ಬಸ್ಸಿನಿಂದ ಹೊರಗೆಳೆದು ಹಲ್ಲೆ ನಡೆಸಿದ ಘಟನೆ ಉಜಿರೆಯಲ್ಲಿ ನಡೆದಿದೆ.

ಕಕ್ಕಿಂಜೆ ನಿವಾಸಿ ಮಹಮ್ಮದ್ ಜಾಹೀರ್‌ (22) ಹಲ್ಲೆಗೊಳಗಾದ ಯುವಕ. ಜಾಹೀರ್‌ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಬಸ್ಸಿನಲ್ಲಿ ಬರುತ್ತಿದ್ದ ವೇಳೆ ತನ್ನ ಪರಿಚಯದ ಯುವತಿಯೊಂದಿಗೆ ಒಂದೇ ಸೀಟಿನಲ್ಲಿ ಕುಳಿತು ಮಾತನಾಡುತ್ತಾ ಪ್ರಯಾಣಿಸುತ್ತಿದ್ದ ಎನ್ನಲಾಗಿದೆ. ಯುವತಿ ಬೆಳ್ತಂಗಡಿಯಲ್ಲಿ ಇಳಿದಿದ್ದಾಳೆ. ಬಸ್ಸಿನಲ್ಲಿ ಇವರನ್ನು ಗಮನಿಸಿ ಯಾರೋ ಉಜಿರೆಯ ಯುವಕರಿಗೆ ಮಾಹಿತಿ ನೀಡಿದ್ದು ಈತನನ್ನು ಉಜಿರೆಯಲ್ಲಿ ಕಾದು ನಿಂತಿದ್ದ ಯುವಕರ ತಂಡ ಬಸ್ಸಿನಿಂದ ಹೊರಗೆಳೆದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆಗೆ ಒಳಗಾಗಿರುವ ಸಾಹಿಲ್ ಬೆಳ್ತಂಗಡಿ ಸರಕಾರಿ ಅಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!