Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ: ಹಿಟ್ ಆಂಡ್ ರನ್; ಬೈಕ್ ಸವಾರ ಸಾವು.!

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ನಾರಾವಿಯಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ತಮ್ಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಘಟನೆಯಲ್ಲಿ ಬೈಕ್’ನಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ.

ಮೃತ ವ್ಯಕ್ತಿಯನ್ನು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಊರುಬೈಲ್ ಚೆಂಚ್ ಗ್ರಾಮದ ಮುಕ್ಕುಯಿ ಮನೆಯ ಲಾರೆನ್ಸ್.ಎಮ್.ಜಿ(38) ಎನ್ನಲಾಗಿದೆ. ಬೆಳ್ತಂಗಡಿ ತಾಲೂಕಿನ ನೆಲ್ಲಿಕಾರು ನಿವಾಸಿ ಜಾನ್(81) ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
- Advertisement -

Related news

error: Content is protected !!