Tuesday, May 7, 2024
spot_imgspot_img
spot_imgspot_img

ಬೆಳ್ತಂಗಡಿ: ಹಿರಿಯ ದಲಿತ ಮುಖಂಡನ ಸಾವಿನ ಸುತ್ತ ಅನುಮಾನ..! ಧಪನಗೈದ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ..!

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಸಮಾಜ ಪರಿವರ್ತನಾ ಚಳವಳಿಯ ನಾಯಕ ಪಿ. ಡೀಕಯ್ಯ ಅವರ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ಹಿನ್ನಲೆ ದಫನಗೈದ ಮೃತದೇಹವನ್ನು ಮತ್ತೆ ಮೇಲಕ್ಕೆತ್ತಲಾಗಿದೆ. ಕುಟುಂಬಸ್ಥರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರಿಂದ ಕಣಿಯೂರು ಗ್ರಾಮದ ಪೊಯ್ಯ ಎಂಬಲ್ಲಿ ಜು.18ರಂದು ಅವರ ದಫನ ಮಾಡಲಾಗಿದ್ದ ಮೃತದೇಹವನ್ನು ಮೇಲಕ್ಕೆತ್ತಿ ತಹಶೀಲ್ದಾರ್ ನೇತೃತ್ವದಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಪಿ. ಡೀಕಯ್ಯ ರವರು10 ದಿನಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿಯ ತನ್ನ ಮನೆಯಲ್ಲಿ ಕುಸಿದು ಬಿದ್ದಿದ್ದರು. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಬೆಳಗ್ಗೆ ಅವರ ಪತ್ನಿ ಗರ್ಡಾಡಿಯ ಮನೆಗೆ ಹೋದಾಗ ಅವರು ಕುಸಿದು ಬಿದ್ದು, ಪ್ರಜ್ಞಾ ಹೀನ ಸ್ಥಿತಿಯಲ್ಲಿರುವುದು ಕಂಡು ಬಂದಿತ್ತು. ತಕ್ಷಣ ಅವರನ್ನು ಮಣಿಪಾಲದ ಕೆಎಂಸಿಗೆ ದಾಖಲಿಸಿದ್ದರು. ಅದಾದ ನಂತರ ವೆಂಟಿಲೆಂಟರ್ನಲ್ಲಿದ್ದ ಅವರು 24ಗಂಟೆಗಳ ಬಳಿಕ ಕೊನೆಯುಸಿರೆಳೆದಿದ್ದರು. ಅವರ ಮೃತ ಶರೀರವನ್ನು ಕಣಿಯೂರು ಗ್ರಾಮದ ಪದ್ಮುಂಜ ಬಳಿಯ ಪೊಯ್ಯದ ಮೂಲ ಮನೆಗೆ ತಂದು ದಫನ ಮಾಡಲಾಗಿತ್ತು.

ಪಿ. ಡೀಕಯ್ಯ

ಆದರೆ ಅವರ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ, ಮೃತರ ತಾಯಿಯ ಕುಟುಂಬಸ್ಥರ ಪರವಾಗಿ ಡೀಕಯ್ಯ ಅವರ ಸಹೋದರಿಯ ಗಂಡ ಪದ್ಮನಾಭ ಎಂಬವರು ಜು.15ರಂದು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ಡೀಕಯ್ಯ ರ ಅಕಾಲಿಕ ಅಪಘಾತಕಾರಿ ಅಸಹಜ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಕೇಳಿಕೊಂಡಿದ್ದರು. ದೂರು ಸ್ವೀಕರಿಸಿದ ಬೆಳ್ತಂಗಡಿ ಪೊಲೀಸರು ಅದರ ಮುಂದಿನ ಪ್ರ ಕ್ರಿಯೆಗಾಗಿ ಪುತ್ತೂರು ಉಪ ವಿಭಾಗಾಧಿಕಾರಿಯವರಿಗೆ ಹಸ್ತಾಂತರಿಸಿದ್ದರು. ಪುತ್ತೂರು ಉಪವಿಭಾಗಾಧಿಕಾರಿಯವರ ಆದೇಶದಂತೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನ್ವಿಕಂ ನೇತೃತ್ವದಲ್ಲಿ ಮೃತದೇಹವನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಯಿತು.

ದ.ಕ. ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಪೋರೋನಿಕ್ಸ್ ತಜ್ಞರಾದ ಡಾ. ರಶ್ಮಿ ಹಾಗೂ ಸಿಬ್ಬಂದಿ, ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಶ್ಮಿ ಅವರ ನೇತೃತ್ವದಲ್ಲಿ ಸ್ಥ ಳದಲ್ಲೇ ಮೃತದೇಹದ ಮರಣೋತ್ತ ರ ಪರೀಕ್ಷೆ ನಡೆಯಿತು. ಈ ಸಂದರ್ಭ ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ ನಂದಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದರು.

- Advertisement -

Related news

error: Content is protected !!