Thursday, April 25, 2024
spot_imgspot_img
spot_imgspot_img

ಬೆಳ್ಳಂಬೆಳಗ್ಗೆ ಮಣಿಪಾಲ್‌ ಸಂಸ್ಥೆಗಳ ಮೇಲೆ ಐಟಿ ರೈಡ್‌; ಏಕಕಾಲಕ್ಕೆ 22 ಕಡೆ ದಾಖಲೆ ಪರಿಶೀಲನೆ

- Advertisement -G L Acharya panikkar
- Advertisement -

ಉಡುಪಿ: ಬೆಂಗಳೂರು ಸೇರಿದಂತೆ ದೇಶದ 22 ಕಡೆಗಳಲ್ಲಿ ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ನಾಲ್ಕು ಇನ್ನೋವಾ ವಾಹನದಲ್ಲಿ ಆಗಮಿಸಿರುವ ಅಧಿಕಾರಿಗಳು ಹೈಗ್ರೌಂಡ್ಸ್‌ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್‌ ಆಸ್ಪತ್ರೆಗೆ ದಾಳಿ ನಡೆಸಿದ್ದಾರೆ. ಬೆಳಗಿನ ಜಾವ 5 ಗಂಟೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆ ಮಣಿಪಾಲದಲ್ಲೂ ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದೆ. ಮಣಿಪಾಲ ಗ್ರೂಪ್ ನ ಫೈನಾನ್ಸ್‌ ವಿಭಾಗದಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ, ಅಧಿಕಾರಿಗಳು ಬೆಂಗಳೂರು ಮತ್ತು ಮಂಗಳೂರಿನಿಂದ ಕಾರು ಬಾಡಿಗೆಗೆ ಪಡೆದು ಬಂದಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

200 ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ಒಟ್ಟು 20 ಕಡೆಗಳಲ್ಲಿ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಓಲ್ಡ್ ಏರ್‌ ಪೋರ್ಟ್ ರೋಡ್, ಕನ್ನಿಂಗ್ ಹ್ಯಾಮ್ ರೋಡ್, ಯಶವಂತಪುರ, ಏರ್‌ ಪೋರ್ಟ್ ರೋಡ್ ಸೇರಿದಂತೆ 20 ಕಡೆ ದಾಳಿ ನಡೆದಿದೆ. ಐಟಿ ಅಧಿಕಾರಿಗಳು ಬೆಳಗ್ಗೆಯಿಂದ ಕಾರ್ಯಾಚರಣೆ ಮಾಡುತ್ತಿದ್ದಾರೆ. 

- Advertisement -

Related news

error: Content is protected !!