Thursday, June 11, 2026
spot_imgspot_img
spot_imgspot_img

ಬೆಳ್ಳಂಬೆಳಗ್ಗೆ ಮಾಜಿ ಸಿಎಂ BSY ಆಪ್ತನ ಮನೆ ಮೇಲೆ ಐಟಿ ದಾಳಿ!

- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಪ್ರಭಾವೀ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಬಿಎಸ್‌ ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್ ಮನೆ ಮೇಲೆ ದಾಳಿ ನಡೆದಿದೆ.

ಬೆಂಗಳೂರಿನ ಭಾಷ್ಯಂ ಸರ್ಕಲ್‌ನಲ್ಲಿರುವ ಬಿಎಸ್‌ ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್ ಮನೆ ಮತ್ತು ಕಚೇರಿ ಸೇರಿ 4 ಕಡೆಗಳಲ್ಲಿ ಐಟಿ ದಾಳಿ ನಡೆದಿದೆ. ಉಮೇಶ್ ಅವರು ಮಾಜಿ ಸಿಎಂ ಯಡಿಯೂರಪ್ಪ, ಸಂಸದ ರಾಘವೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಮೂವರಿಗೂ ಪಿಎ ರೀತಿ ಕೆಲಸ ಮಾಡುತ್ತಿದ್ದರು. ರಾಘವೇಂದ್ರ ಬೆಂಗಳೂರಿಗೆ ಬಂದಾಗ ರಾಘವೇಂದ್ರ ಅವರ ಕೆಲಸಗಳ ನಿರ್ವಹಣೆ ಮಾಡುತ್ತಿದ್ದರು. ಯಡಿಯೂರಪ್ಪ ವಿಪಕ್ಷ ನಾಯಕರಾಗಿದ್ದಾಗ ಮತ್ತು ಮುಖ್ಯಮಂತ್ರಿ ಆಗಿದ್ದಾಗ ಅವರಿಗೆ ಉಮೇಶ್ ಪಿಎ ಆಗಿದ್ದರು

- Advertisement -

Related news

error: Content is protected !!