- Advertisement -
- Advertisement -
ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆಯ ಉದ್ವಿಗ್ನ ಪರಿಸ್ಥಿತಿ ಮಾಸುವ ಮೊದಲೇ ಮತಾಂಧರೂ ಮತ್ತೆ ಬಾಲ ಬಿಚ್ಚಿದ್ದಾರೆ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿ ಶಫೀಕ್ ನ ತಮ್ಮ ಸಫ್ರಿದ್ ಎಂಬಾತ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರಶಾಂತ್ ಬೆಳ್ಳಾರೆಯವರಿಗೆ ಫೋನ್ ಮುಖಾಂತರ ಜೀವ ಬೆದರಿಕೆಯ ಧಮ್ಕಿಯನ್ನು ನೀಡಿದ್ದು ಇದನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ.

ತಕ್ಷಣವೇ ಪೋಲೀಸ್ ಇಲಾಖೆ ಎಚ್ಚೆತ್ತುಕೊಂಡು ಭಯೋತ್ಪಾದಕ ಮಾನಸಿಕತೆಯ ಅರೋಪಿಯನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಅಗ್ರಹಿಸುತ್ತದೆ ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡುತ್ತಿದ್ದೇವೆ ಎಂದು ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತಡ್ಕರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -