Wednesday, June 17, 2026
spot_imgspot_img
spot_imgspot_img

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಆರೋಪಿಗಳನ್ನು ಪಿಎಫ್‌ಐ ಕಚೇರಿಗೆ ಕರೆತಂದು ಸ್ಥಳ ಮಹಜರು

- Advertisement -
- Advertisement -

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಇಂದು ಬೆಳಿಗ್ಗೆ ಸುಳ್ಯದ ಪಿಎಫ್‌ಐ ಕಚೇರಿಗೆ ಕರೆತಂದು ಪೊಲೀಸರು ಮಹಜರು ನಡೆಸಿದ್ದಾರೆ.

ಹತ್ಯೆ ಪ್ರಕರಣದಲ್ಲಿ ನಿನ್ನೆಯಷ್ಟೇ ಸುಳ್ಯ ನಾವೂರು ನಿವಾಸಿ ಆಬಿದ್, ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದರು.

ಇಂದು ಬೆಳಿಗ್ಗೆ 8 ಗಂಟೆಗೆ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ ಪೊಲೀಸ್ ತಂಡ ಈ ಇಬ್ಬರನ್ನು ಸುಳ್ಯದ ಗಾಂಧಿನಗರದ ಆಲೆಟ್ಟಿ ಕ್ರಾಸ್‌ನಲ್ಲಿರುವ ಪಿಎಫ್‌ಐ ಕಚೇರಿಗೆ ಕರೆತಂದು ಮಹಜರು ನಡೆಸಿದ್ದಾರೆ.

ಆರೋಪಿಗಳನ್ನು ಇಬ್ಬರನ್ನು ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದು, ಪ್ರವೀಣ್‌ ಹತ್ಯೆಗೆ ಇದೆ ಕಛೇರಿಯಲ್ಲಿ ಸಂಚು ರೂಪಿಸಿರುವ ಮಾಹಿತಿ ಇದೆ.

- Advertisement -

Related news

error: Content is protected !!