Saturday, June 6, 2026
spot_imgspot_img
spot_imgspot_img

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಕನಸಿನ ಮನೆಗೆ ಶಂಕು ಸ್ಥಾಪನೆ; 60ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ

- Advertisement -
- Advertisement -
vtv vitla

ಬೆಳ್ಳಾರೆ: ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಕುಟುಂಬಸ್ಥರಿಗೆ ಭರವಸೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೊಟ್ಟು ಮಾತಿನಂತೆ ನಡೆದುಕೊಂಡು, ಪ್ರವೀಣ್ ಕನಸಿನ ಮನೆಗೆ ಭೂಮಿ ಪೂಜೆ ನೆರವೇರಿಸಿದ್ದಾರೆ.

ಇಂದು ಬೆಳಗೆ, 9.30ಕ್ಕೆ ದಿ.ಪ್ರವೀಣ್ ಕನಸಿನ ಮನೆಗೆ ಪ್ರವೀಣ್ ಸಮಾಧಿ ಬಳಿಯ ಜಾಗದಲ್ಲಿ 2.700ಚ.ಅಡಿಯ ನೂತನ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದ್ದು, 60ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣವಾಗಲಿದೆ. ಜಿಲ್ಲೆಯ ಪ್ರತಿಷ್ಠಾನ ಮೊಗರೋಡಿ ಕನ್‌ಸ್ಟ್ರಕ್ಷನ್‌ ಕಂಪನಿಗೆ ಪ್ರವೀಣ್‌ ಮನೆ ನಿರ್ಮಾಣದ ಜವಾಬ್ದಾರಿಯನ್ನು ವಹಿಸಲಾಗಿದ್ದು, ಶೀಘ್ರವೇ ಮನೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ.

ಭೂಮಿ ಪೂಜೆ ಕಾರ್ಯದ ವೇಳೆ ಉಡುಪಿ ಉಸ್ತುವಾರಿ, ಹಾಲಿ ಸುಳ್ಯ ಶಾಸಕ ಅಂಗಾರ, ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಪುತ್ತೂರು ಶಾಸಕ ಸಂಜೀವ ಮಠಂದೂರು, ಹಿಂದೂ ಮುಖಂಡ ಮುರಳೀಕೃಷ್ಣ, ಹಂಸತಡ್ಕ ಪ್ರವೀಣ್ ತಂದೆ ತಾಯಿ, ಪತ್ನಿ ನೂತನ ಸೇರಿದಂತೆ ಕುಟುಂಬಸ್ಥರು ಸ್ಥಳೀಯರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisement -

Related news

error: Content is protected !!