Saturday, April 20, 2024
spot_imgspot_img
spot_imgspot_img

ಬೆಳ್ಳಾರೆ: ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ಎಂಟು ಯುವಕರ ಬಂಧನ.!

- Advertisement -G L Acharya panikkar
- Advertisement -

ಬೆಳ್ಳಾರೆ : ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಎಂಟು ಆರೋಪಿತರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಳನ್ನ ಅಭಿಲಾಷ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್, ಭಾಸ್ಕರ ಎಂದು ಗುರುತಿಸಲಾಗಿದೆ. ಸುಳ್ಯದ ಬೆಳ್ಳಾರೆಯ ಕಳಂಜ ಎಂಬಲ್ಲಿ ಈ ಘಟನೆ ನಡೆದಿದ್ದು, ಮಾರಣಾಂತಿಕ ಹಲ್ಲೆಯಿಂದ ಗಂಭೀರ ಗಾಯಗೊಂಡ ಮಸೂದ್ (19) ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಘಟನೆ ವಿವರ::

ಪರಿಚಯದ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದ ಬಳಿಕ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸುವುದಾಗಿ ಕರೆಸಿಕೊಂಡ ತಂಡ ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬೆಳ್ಳಾರೆಯ ಕಳಂಜ ಎಂಬಲ್ಲಿ ನಡೆದಿತ್ತು. ಮಾರಣಾಂತಿಕ ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ಮುಸ್ಲಿಂ ಯುವಕನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಿದ್ದು. ಯುವಕನ ಸ್ಥಿತಿ ಚಿಂತಾಜನಕವಾಗಿತ್ತು ಎನ್ನಲಾಗಿದೆ.

ಕಳೆಂಜದ ನಿವಾಸಿಗಳಿಬ್ಬರ ನಡುವೆ ಅಂಗಡಿಯೊಂದರ ಬಳಿ ಕ್ಷುಲ್ಲಕ ವಿಚಾರಕ್ಕೆ ಜಗಳ ಉಂಟಾಗಿತ್ತು. ಇಬ್ಬರು ಪರಸ್ಪರ ಹೊಡೆದಾಡಿಕೊಂಡಿದ್ದು ಹಿಂದೂ ಯುವಕನ ಹಣೆ ಭಾಗಕ್ಕೆ ಏಟಾಗಿತ್ತು ಎನ್ನಲಾಗಿದೆ. ಇದಾದ ಬಳಿಕ ಹಿಂದೂ ಯುವಕ ಮತ್ತು ಆತನ ಸ್ನೇಹಿತರು, ಮುಸ್ಲಿಂ ಯುವಕನಿಗೆ ಕರೆಮಾಡಿ ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸೋಣವೆಂದ ಹಿನ್ನೆಲೆಯಲ್ಲಿ ಯುವಕ ಮತ್ತು ಆತನ ಸ್ನೇಹಿತ ಬೈಕ್ ನಲ್ಲಿ ತಂಡ ಕರೆದ ಸ್ಥಳಕ್ಕೆ ತೆರಳಿದ್ದಾರೆ. ತಕ್ಷಣ ಅಲ್ಲಿ ಅಡಗಿ ಕುಳಿತಿದ್ದ ತಂಡ ಏಕಾಏಕಿ ದೊಣ್ಣೆ, ರಾಡ್ ,ಸೋಡಾ ಬಾಟಲಿಯಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಪೊಲೀಸರು ಕೂಡ ಪ್ರಕರಣವನ್ನು ಸೌಹಾರ್ದಯುತವಾಗಿ ಇತ್ಯರ್ಥ ಪಡಿಸಲು ಹೇಳಿ ಅಲ್ಲಿಂದ ತೆರಳಿದ್ದಾರೆ ಎನ್ನಲಾಗಿದೆ. ತಲೆಗೆ ತೀವ್ರ ಹಲ್ಲೆಗೊಳಗಾಗಿ ಯುವಕ ಮನೆಯೊಂದರ ಬಾವಿಯ ಬಳಿ ಪ್ರಜ್ಞಾಹೀನನಾಗಿ ಬಿದ್ದಿರುವುದು ಕಂಡುಬಂದಿದ್ದು, ಈ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ ಕೂಡ ಆಗಿದೆ. ತಕ್ಷಣ ಆತನನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿಗಳ ಬಂಧನವಾಗಿದೆ.

- Advertisement -

Related news

error: Content is protected !!