Thursday, May 2, 2024
spot_imgspot_img
spot_imgspot_img

ಬೈಂದೂರಿನ ಯುವಕರ ಮೇಲೆ ಬೆಂಗಳೂರಿನ ಪುಡಿ ರೌಡಿಗಳಿಂದ ಹಲ್ಲೆ; ಮೂವರು ಅರೆಸ್ಟ್‌

- Advertisement -G L Acharya panikkar
- Advertisement -

ಸಿಗರೇಟ್ ಹಣ ಕೇಳಿದ್ದಕ್ಕೆ ಅಂಗಡಿ ಹುಡುಗರ ಮೇಲೆ ಹಲ್ಲೆಗೈದು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕಾರ್ತಿಕ್, ಸಲ್ಮಾನ್, ಕಾರ್ತಿಕ್ ಎನ್ನಲಾಗಿದೆ.

ಬೈಂದೂರು ಮೂಲದ ನವೀನ್ ಕುಮಾರ್, ಪ್ರಜ್ವಲ್ ಶೆಟ್ಟಿ, ನಿತಿನ್ ಶೆಟ್ಟಿ ಎಂಬವರ ಮೇಲೆ ಗುರುವಾರ ರಾತ್ರಿ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಘಟನೆ ಅಂಗಡಿಯಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಭಾರೀ ವೈರಲ್ ಆಗಿತ್ತು. ಹಲ್ಲೆಗೈದ ದುಷ್ಕರ್ಮಿಗಳು 1.90 ಲಕ್ಷ ರೂಪಾಯಿ ಮೌಲ್ಯದ ಸೊತ್ತು ಎಗರಿಸಿ, ಪ್ರಾಣ ಬೆದರಿಕೆ ಹಾಕಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಎಚ್‌ಎಎಲ್ ಪೊಲೀಸರು ಬಂಧಿಸಿದ್ದಾರೆ, ಡೆಲಿವರಿ ಬಾಯ್ ಆಗಿದ್ದ ಕಾರ್ತಿಕ್(20), ಅಲ್ಯೂಮಿನಿಯಂ ವರ್ಕ್ ಮಾಡುತ್ತಿದ್ದ ಸಲ್ಮಾನ್(20) ಹಾಗೂ ಖಾಸಗಿ ಹೊಟೇಲ್ ಮ್ಯಾನೇಜರ್ ಕಾರ್ತಿಕ್(23) ಬಂಧಿತರು. ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ವೈಟ್‌ಫೀಲ್ಡ್ ಡಿಸಿಪಿ ಗಿರೀಶ್‌ ತಿಳಿಸಿದ್ದಾರೆ.

ಡಿ.9ರ ರಾತ್ರಿ 11.30 ರ ಸಮಯದಲ್ಲಿ ಏಳೆಂಟು ಜನರ ರೌಡಿಗಳ ಗುಂಪು ಕುಂದಲಹಳ್ಳಿ ಗೇಟ್ ಬಳಿಯಿರುವ ಬ್ರಹ್ಮಲಿಂಗೇಶ್ವರ ಬೇಕರಿಗೆ ಟೀ ಕುಡಿಯಲು ಮತ್ತು ಸಿಗರೇಟ್ ಸೇದಲು ಬಂದಿದ್ದು ಬೇಕರಿ ಸಿಬಂದಿ ಸಿಗರೇಟ್ ಹಣ ಕೇಳಿದ್ದಕ್ಕೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಹಿಗ್ಗಾಮುಗ್ಗಾ ಥಳಿಸಿ ಹಣ ಕಿತ್ತುಕೊಂಡು ಪರಾರಿಯಾಗಿದ್ದರು. ಹಲ್ಲೆಗೊಳಗಾದವರು ಎಚ್‌ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

- Advertisement -

Related news

error: Content is protected !!