Saturday, June 6, 2026
spot_imgspot_img
spot_imgspot_img

ಬೈಂದೂರು: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು

- Advertisement -
- Advertisement -

ಬೈಂದೂರು: ಯುವಕನೊಬ್ಬ ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವನ್ನಪ್ಪಿದ ಘಟನೆ ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಸಂದೀಪನ್ ಶಾಲೆಯ ಬಳಿ ನಡೆದಿದೆ. ಪಾರ್ವತಿ ಅವರ ಪುತ್ರ ಕರುಣಾಕರ ಪೂಜಾರಿ (33) ಎಂದು ಗುರುತಿಸಲಾಗಿದೆ.

ಅವಿವಾಹಿತರಾಗಿರುವ ಕರುಣಾಕರ ಪೂಜಾರಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಮನೆಯಲ್ಲಿ ಧರ್ಮಸ್ಥಳಕ್ಕೆ ಹೋಗುವುದಾಗಿ ತಿಳಿಸಿ ಹೋದವರು, ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!