Sunday, June 29, 2025
spot_imgspot_img
spot_imgspot_img

ಬೈಕ್‌ಗೆ ಟಿಪ್ಪರ್‌ ಲಾರಿ ಡಿಕ್ಕಿ; ಸವಾರ ಮೃತ್ಯು

- Advertisement -
- Advertisement -

ಬೆಂಗಳೂರು: ಇಲ್ಲಿನ ನಾಯಂಡಹಳ್ಳಿ ಜಂಕ್ಷನ್‌ ಸಮೀಪ ಬೈಕ್‌ಗೆ ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಯುವಕರಿಬ್ಬರು ಎಕ್ಸ್‌ಎಲ್ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ, ನಿಯಂತ್ರಣ ಸಿಗದೆ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ಕೆಳಗೆ ಸಿಲುಕಿದ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು ಹಿಂಬದಿ ಸವಾರ ಗಂಭೀರವಾಗಿ ಗಾಯ‌ಗೊಂಡಿದ್ದಾನೆ. ಇತ್ತ ಅಪಘಾತ ನಡೆದ ಬೆನ್ನಲ್ಲೇ ಲಾರಿ ಬಿಟ್ಟು ಚಾಲಕನೊಬ್ಬ ಪರಾರಿ ಆಗಿದ್ದಾನೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಗಾಯಾಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ನಾಯಂಡಹಳ್ಳಿ ಜಂಕ್ಷನ್‌ ಸುತ್ತಮುತ್ತ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಈ ಸಂಬಂಧ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಪರಾರಿ ಆಗಿರುವ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.

- Advertisement -

Related news

error: Content is protected !!