- Advertisement -
- Advertisement -
ಮಂಗಳೂರು: ಕೋವಿಡ್ 2ನೇ ಅಲೆಯನ್ನು ತಡೆಗಟ್ಟಲು ಕರ್ನಾಟಕ ರಾಜ್ಯ ಸರಕಾರ ಜಾರಿಗೊಳಿಸಿರುವ ಲಾಕ್ ಡೌನ್ ಸಂದರ್ಭದಲ್ಲಿ ಬ್ಯಾಂಕ್ ಗ್ರಾಹಕ ವ್ಯವಹಾರದ ಸಮಯವನ್ನು ಬೆಳಗ್ಗೆ 8 ರಿಂದ ಬೆಳಗ್ಗೆ 11 ಗಂಟೆಯವರೆಗೆ ನೀಡುವಂತೆ ಶಾಸಕ ವೇದವ್ಯಾಸ್ ಕಾಮತ್ ರವರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ರವರಿಗೆ ಮನವಿ ಮಾಡಿಕೊಂಡಿದ್ದಾರೆ.

ಈ ಹಿಂದೆ ಬ್ಯಾಂಕ್ ಗ್ರಾಹಕ ವ್ಯವಹಾರದ ಅವಧಿಯನ್ನು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನೀಡಲಾಗಿತ್ತು. ಆದರೆ ಲಾಕ್ ಡೌನ್ ಸಂದರ್ಭದಲ್ಲಿ ಬ್ಯಾಂಕ್ ವ್ಯವಹಾರಕ್ಕೆ ಬೆಳಗ್ಗೆ 8 ಗಂಟೆಯಿಂದ 11 ಗಂಟೆಯ ವರೆಗೆ ಸಮಯಾವಕಾಶ ನೀಡುವುದರಿಂದ ಸಾರ್ವಜನಿಕರಿಗೆ ಓಡಾಟಕ್ಕೆ ಬಹಳಷ್ಟು ಅನುಕೂಲವಾಗಲಿದೆ.

ಲಾಕ್ ಡೌನ್ ಸಡಿಲಿಕೆಯ ಅವಧಿಯಲ್ಲಿ ಯಾವುದೇ ಸಮಸ್ಯೆಯಿಲ್ಲದೆ ಓಡಾಡಬಹುದು. ಮಾತ್ರವಲ್ಲ ಬ್ಯಾಂಕ್ ನೌಕರರಿಗೂ ಇದರಿಂದ ಬೇಗನೆ ಕೆಲಸ ಕಾರ್ಯಗಳನ್ನು ಮುಗಿಸಿ ಮನೆ ಸೇರುವಲ್ಲಿ ಇದು ಸಹಕಾರಿಯಾಗಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.


- Advertisement -








