Friday, May 10, 2024
spot_imgspot_img
spot_imgspot_img

ಬ್ರಹ್ಮಶ್ರೀ ನಾರಾಯಣ ಗುರು ಪಠ್ಯ ಸಮಾಜ-ವಿಜ್ಞಾನಕ್ಕೆ ಮರುಸೇರ್ಪಡೆ

- Advertisement -G L Acharya panikkar
- Advertisement -

ಬೆಂಗಳೂರು: ಕನ್ನಡ ಭಾಷೆಯಲ್ಲಿ ಅಳವಡಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರು ಪಠ್ಯವನ್ನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವೇಳೆಯಲ್ಲಿ ಕೈಬಿಡಲಾಗಿದ್ದು, ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಇದೀಗ ಕನ್ನಡ ಭಾಷೆಯಲ್ಲಿ ಅಳವಡಿಸಿರುವುದನ್ನು ತೆಗೆದು, ಸಮಾಜ ವಿಜ್ಞಾನ ಪಠ್ಯದಲ್ಲಿ ಅಳವಡಿಸಲಾಗಿದೆ ಎಂಬುದಾಗಿ ಶಿಕ್ಷಣ ಇಲಾಖೆ ಸ್ಪಷ್ಟ ಪಡಿಸಿದೆ.

ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಪ್ರಸ್ತುತ 10 ನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ಅಳವಡಿಸಿರುವುದನ್ನು ತೆಗೆದು 10 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಯಥಾವತ್ತಾಗಿ ಅಳವಡಿಸಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾರೆ.

ಇನ್ನು 2023-24ನೇ ಸಾಲಿಗೆ ಪ್ರಸ್ತುತ 10ನೇ ತರಗತಿಯ ಕನ್ನಡ ಪ್ರಥಮ ಭಾಷಾ ಪುಸ್ತಕದಲ್ಲಿ ಇರುವ ಶ್ರೀನಾರಾಯಣಗುರು ಅವರ ವಿಷಯಾಂಶಗಳನ್ನು ಕೈಬಿಟ್ಟು, 2023-24ನೇ ಸಾಲಿಗೆ 10ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಅಳವಡಿಸಿಕೊಳ್ಳುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

- Advertisement -

Related news

error: Content is protected !!