Tuesday, April 16, 2024
spot_imgspot_img
spot_imgspot_img

ಬ್ಲ್ಯಾಕ್ ಫಂಗಸ್ ಔಷಧಗಳಿಗೆ ತೆರಿಗೆ ವಿನಾಯಿತಿ; ಕೊರೊನಾ ಲಸಿಕೆಯ ಮೇಲೆ ಶೇಕಡಾ 5 ಜಿಎಸ್​ಟಿ ಮುಂದುವರಿಕೆ; ನಿರ್ಮಲಾ ಸೀತಾರಾಮನ್

- Advertisement -G L Acharya panikkar
- Advertisement -

ನವದೆಹಲಿ: ಕೊರೊನಾ ವಿರುದ್ಧ ಹೋರಾಡಲು ಬಳಕೆಯಾಗುವ ಕೆಲವು ಔಷಧಗಳು, ಆಸ್ಪತ್ರೆ ಮತ್ತು ವೈದ್ಯಕೀಯ ಉಪಕರಣಗಳ ಮೇಲೆ ತೆರಿಗೆ ಪ್ರಮಾಣವನ್ನು ಇಳಿಕೆ ಮಾಡಲಾಗಿದೆ. ಸರಕು ಮತ್ತು ಸೇವಾ ತೆರಿಗೆ ಮಂಡಳಿ (ಜಿಎಸ್​ಟಿ ಕೌನ್ಸಿಲ್) ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಈ ತೆರಿಗೆ ವಿನಾಯಿತಿಯನ್ನು ಕೆಲವು ಮಂತ್ರಿಗಳ ಸಲಹೆ, ಶಿಫಾರಸಿನಂತೆ ಕೈಗೊಳ್ಳಲಾಗಿದೆ ಎಂದು ಜಿಎಸ್​ಟಿ ಮಂಡಳಿ ತಿಳಿಸಿದೆ.

ಟೋಸಿಲಿಜುಮಾಬ್, ಅಂಫೋಟೆರಿಸಿನ್ ಬಿ ಇಂಜೆಕ್ಷನ್ ಮೇಲಿನ ಜಿಎಸ್‌ಟಿಯನ್ನು ಶೂನ್ಯಕ್ಕೆ ಇಳಿಕೆ ಮಾಡಲಾಗಿದೆ. ರೆಮಿಡಿಸಿವರ್ ಇಂಜೆಕ್ಷನ್ ಮೇಲಿನ ಜಿಎಸ್‌ಟಿ ಶೇ.5 ಕ್ಕೆ ಇಳಿಕೆ ಮಾಡಲಾಗಿದೆ. ಅಲ್ಲದೆ, ಅಂಬ್ಯುಲೆನ್ಸ್ ಮೇಲಿನ ಜಿಎಸ್‌ಟಿ ದರ ಕೂಡ ಇಳಿಕೆಯಾಗಿದೆ.

ಬ್ಲ್ಯಾಕ್ ಫಂಗಸ್​ಗೆ​ ಸಂಬಂಧಿಸಿದ ಔಷಧಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಕೊವಿಡ್​ಗೆ ಸಂಬಂಧಿಸಿದ 3 ವಸ್ತುಗಳಿಗೆ ಜಿಎಸ್​ಟಿ ಇಲ್ಲ ಎಂದು ದೆಹಲಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ನೀಡಿದ್ದಾರೆ.

ವಿತ್ತ ಸಚಿವಾಲಯದಲ್ಲಿ ಜಿಎಸ್​ಟಿ ಮಂಡಳಿ ಸಭೆ ನಡೆದ ಬಳಿಕ ಅವರು ಮಾತನಾಡಿದ್ದಾರೆ. ಲಸಿಕೆ ಮೇಲಿನ ಜಿಎಸ್​ಟಿ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಕೊರೊನಾ ಲಸಿಕೆ ಮೇಲಿನ ಶೇ.5ರಷ್ಟು ಜಿಎಸ್​ಟಿ ಮುಂದುವರಿಕೆ ಆಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಶೇ.75ರಷ್ಟು ಕೊವಿಡ್​ ಲಸಿಕೆಯನ್ನು ಕೇಂದ್ರವೇ ಖರೀದಿಸುತ್ತಿದೆ. ಹೀಗಾಗಿ ಲಸಿಕೆ ಮೇಲಿನ ಜಿಎಸ್​ಟಿಯಿಂದ ಜನರಿಗೆ ಹೊರೆಯಾಗಲ್ಲ. ಕೇಂದ್ರ ಸರ್ಕಾರ ಜನರಿಗೆ ಲಸಿಕೆಯನ್ನ ಉಚಿತವಾಗಿ ನೀಡುತ್ತಿದೆ ಎಂದು ಅವರು ತಿಳಿಸಿದ್ದಾರೆ. ಅಂಬುಲೆನ್ಸ್​ ಮೇಲಿನ ಜಿಎಸ್​ಟಿ ಶೇ.28ರಿಂದ ಶೇ.12ಕ್ಕೆ ಇಳಿಕೆ ಮಾಡಲಾಗಿದೆ. ಜಿಎಸ್​ಟಿ ಮಂಡಳಿ ಕೈಗೊಂಡ ನಿರ್ಧಾರ ತಕ್ಷಣವೇ ಜಾರಿಯಾಗಲಿದೆ. ವ್ಯಾಪಾರಿಗಳಿಗೆ ರಿಲೀಫ್ ನೀಡಿಕೆ ಇಂದಿನ ಅಜೆಂಡಾದಲ್ಲಿರಲಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದಾರೆ.

ಮೆಡಿಕಲ್ ಗ್ರೇಡ್ ಆಕ್ಸಿಜನ್, ಆಕ್ಸಿಜನ್ ಕಾನ್ಸನ್​ಟ್ರೇಟರ್, ವೆಂಟಿಲೇಟರ್, ವೆಂಟಿಲೇಟರ್ ಮಾಸ್ಕ್, ‌BiPAP ಮೆಷಿನ್ ಮೇಲಿನ ಜಿಎಸ್‌ಟಿ ದರವನ್ನು ಶೇ. 12 ರಿಂದ ಶೇ.5 ಕ್ಕೆ ಇಳಿಕೆ ಮಾಡಲಾಗಿದೆ. ಕೊರೊನಾ ಟೆಸ್ಟಿಂಗ್ ಕಿಟ್ ಮೇಲಿನ ಜಿಎಸ್‌ಟಿ ಶೇ.12 ರಿಂದ ಶೇ.5 ಕ್ಕೆ ಇಳಿಸಲಾಗಿದೆ. ಪಲ್ಸ್ ಆಕ್ಸಿಮೀಟರ್ ಮೇಲಿನ ಜಿಎಸ್‌ಟಿ ಶೇ.12ರಿಂದ ಶೇ. 5 ಕ್ಕೆ ಇಳಿಕೆಯಾಗಿದೆ.

ಹ್ಯಾಂಡ್ ಸ್ಯಾನಿಟೈಸರ್, ಉಷ್ಣಾಂಶ ಪರೀಕ್ಷಿಸುವ ಯಂತ್ರಗಳು, ಗ್ಯಾಸ್/ಎಲೆಕ್ಟ್ರಿಕ್ ಚಿತಾಗಾರಗಳ ಸಾಮಗ್ರಿ, ಆಳವಡಿಕೆಗೆ ಜಿಎಸ್‌ಟಿ ಶೇ.18 ರಿಂದ ಶೇ.5 ಕ್ಕೆ ಇಳಿಕೆ ಮಾಡಲಾಗಿದೆ. ಅಂಬ್ಯುಲೆನ್ಸ್ ಮೇಲಿನ ಜಿಎಸ್‌ಟಿ ಶೇ.28 ರಿಂದ ಶೇ.12 ಕ್ಕೆ ಇಳಿಕೆಯಾಗಿದೆ. ಈ ಜಿಎಸ್‌ಟಿ ದರ ಇಳಿಕೆಯು 2021 ರ ಸೆಪ್ಟೆಂಬರ್ ವರೆಗೆ ಜಾರಿಯಲ್ಲಿ ಇರುತ್ತದೆ ಎಂದು ಇಂದು ನಡೆದ ಜಿಎಸ್‌ಟಿ ಮಂಡಳಿಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

- Advertisement -

Related news

error: Content is protected !!