Tuesday, June 23, 2026
spot_imgspot_img
spot_imgspot_img

ಭದ್ರತಾ ಪಡೆಯ ಕಾರ್ಯಾಚರಣೆ: ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಹಳ್ಳಿಯಲ್ಲಿ ಇದ್ದ ಭಯೋತ್ಪಾದಕರ ಅಡಗುತಾಣವನ್ನು ಭದ್ರತಾ ಪಡೆಗಳು ಭೇದಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ.

ಭಾರತ-ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯ ದಿಗ್ವಾರ್ ಸೆಕ್ಟರ್‌ನ ನೂರಕೋಟೆ ಗ್ರಾಮದಲ್ಲಿ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಅಡಗು ತಾಣ ಪತ್ತೆಯಾಗಿದ್ದು ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ ಎರಡು ಎಕೆ-47 ರೈಫಲ್‌ಗಳು, ಎರಡು ಪಾಕಿಸ್ತಾನ ನಿರ್ಮಿತ 23 ಬೋರ್ ರೈಫಲ್‌ಗಳು, ಒಂದು ಚೀನಾ ನಿರ್ಮಿತ ಪಿಸ್ತೂಲ್, 63 ಸುತ್ತುಗಳ ಎಕೆ 47, 20 ಸುತ್ತುಗಳ 23 ಬೋರ್ ರೈಫಲ್ ಮತ್ತು ಎರಡು ಸುತ್ತಿನ ಚೀನಾ ಪಿಸ್ತೂಲ್ ಸೇರಿವೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದು , ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!