Sunday, July 6, 2025
spot_imgspot_img
spot_imgspot_img

ಭಯೋತ್ಪಾದಕರಿಂದ ಗುಂಡಿನ ದಾಳಿ-ಕಾಶ್ಮೀರಿ ಪಂಡಿತ ಸಾವು

- Advertisement -
- Advertisement -

ಶ್ರೀನಗರ: ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಕಾಶ್ಮೀರ ಪಂಡಿತರೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ.

vtv vitla
vtv vitla

ಮೃತ ವ್ಯಕ್ತಿಯನ್ನು ರಾಹುಲ್ ಭಟ್ ಎಂದು ಗುರುತಿಸಲಾಗಿದೆ. ಅವರು ಇಲ್ಲಿನ ಬುಡ್ಗಾಮ್‌ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದರು. ದಕ್ಷಿಣ ಕಾಶ್ಮೀರದ ಚದೂರ ತಹಸೀಲ್ದಾರ್ ಕಚೇರಿಯಲ್ಲಿ ರಾಹುಲ್ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಗಂಭೀರ ಗಾಯಗೊಂಡ ಅವರನ್ನು ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು ಎಂದು ವರದಿಯಾಗಿದೆ.

ಮೃತ ರಾಹುಲ್ ಅಲ್ಪಸಂಖ್ಯಾತ ಕಾಶ್ಮೀರಿ ಪಂಡಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಘಟನೆ ನಡೆದ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿವೆ.

ಘಟನೆ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಅಶ್ವನಿ ಹಂಡ, ಸರ್ಕಾರ ಕಣಿವೆ ಪ್ರದೇಶದಲ್ಲಿ ಕಾಶ್ಮೀರಿ ಪಂಡಿತರಿಗೆ ಸೂಕ್ತ ಭದ್ರತೆ ಒದಗಿಸುತ್ತಿಲ್ಲ. ಹಾಗಾಗಿ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಕೇಂದ್ರದ ವಿರುದ್ದ ಕಿಡಿಕಾರಿದ್ದಾರೆ.

- Advertisement -

Related news

error: Content is protected !!