Monday, April 29, 2024
spot_imgspot_img
spot_imgspot_img

ಭಾರತಕ್ಕೆ ಕಾಲಿಟ್ಟ ಒಮಿಕ್ರಾನ್; ಕರ್ನಾಟಕದಲ್ಲಿ ಮೊದಲ ಕೇಸ್ ಪತ್ತೆ..!!

- Advertisement -G L Acharya panikkar
- Advertisement -
vtv vitla
vtv vitla
vtv vitla

ಬೆಂಗಳೂರು: ಭಾರತದಲ್ಲಿ ಮೊದಲ ಬಾರಿಗೆ ಒಮಿಕ್ರಾನ್ ತಳಿಯ ಕೊರೊನಾ​​​ ಪತ್ತೆಯಾಗಿದ್ದು, ಅದು ಕರ್ನಾಟಕದಲ್ಲೇ ಅಂತ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕರ್ನಾಟಕದ ಇಬ್ಬರಲ್ಲಿ ಒಮಿಕ್ರಾನ್​ ಸೋಂಕು ಇರುವುದು ದೃಢಪಟ್ಟಿದೆ.

66 ವರ್ಷದ ವೃದ್ಧ, 46 ವರ್ಷದ ವ್ಯಕ್ತಿಗೆ ಒಮಿಕ್ರಾನ್​ ಸೋಂಕು ತಗುಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕರ್ನಾಟಕದ ಮೂಲಕವೇ ಭಾರತಕ್ಕೆ ಒಮಿಕ್ರಾನ್ ಎಂಟ್ರಿ ಕೊಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ. ಪ್ರಾಥಮಿಕ, ದ್ವಿತೀಯ ಸಂಪರ್ಕಿತರನ್ನು ಪತ್ತೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

vtv vitla
vtv vitla

ಕರ್ನಾಟಕದ ಇಬ್ಬರಿಗೆ ಒಮಿಕ್ರಾನ್ ವೈರಸ್ ದೃಢವಾಗಿದ್ದು, ಈ ಪೈಕಿ ಬೆಂಗಳೂರಿನ ಕೋಣನಕುಂಟೆ ನಿವಾಸಿ ಒಬ್ಬರಿಗೆ ​ಸೋಂಕು ತಗುಲಿದೆ ಎಂದು ಹೇಳಲಾಗುತ್ತಿದೆ. ಇನ್ನು ಓರ್ವ ಸೋಂಕಿತ ವಾಪಸ್ ವಿದೇಶಕ್ಕೆ ಹೋಗಿರುವ ಮಾಹಿತಿ ಇದೆ. ಕೇಸ್​ ಪತ್ತೆಯಾಗಿರುವ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುಂಜಾಗ್ರತೆ ವಹಿಸಿ. ಹೆಚ್ಚು ಜನರು ಸೇರುವ ಕಾರ್ಯಕ್ರಮಗಳಿಂದ ದೂರವಿರಿ ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಡೆಲ್ಟಾ ವೈರಸ್​ಗಿಂತ ಒಮಿಕ್ರಾನ್​ ತೀವ್ರತೆ 5 ಪಟ್ಟು ಹೆಚ್ಚಾಗಿರುತ್ತದೆ ಎಂದು ದೆಹಲಿಯಲ್ಲಿ ಕೇಂದ್ರದ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್​​​ ಹೇಳಿಕೆ ನೀಡಿದ್ದಾರೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!