Thursday, April 25, 2024
spot_imgspot_img
spot_imgspot_img

ಭಾರತದಲ್ಲಿ 2,967 ಹುಲಿಗಳಿವೆ: ಸುಪ್ರೀಂ ಕೋರ್ಟ್‌‌ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

- Advertisement -G L Acharya panikkar
- Advertisement -

‘2018ರ ವರದಿಯೊಂದರ ಪ್ರಕಾರ ಭಾರತದಾದ್ಯಂತ ಇರುವ 53 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಟ್ಟು 2,967 ಹುಲಿಗಳು ಇವೆ’ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ದೇಶದಲ್ಲಿ ಅಪಾಯದಲ್ಲಿರುವ ಹುಲಿಗಳನ್ನು ರಕ್ಷಿಸಲು ಕೋರಿ 2017ರಲ್ಲಿ ವಕೀಲ ಅನುಪಮ್‌ ತ್ರಿಪಾಠಿ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್‌ ಹಾಗೂ ಬಿ.ವಿ. ನಾಗರತ್ನ ಅವರಿದ್ದ ಪೀಠವು ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಐಶ್ವರ್ಯ ಭಾಟಿ ಅವರು, ‘ಹುಲಿಗಳ ಸಂರಕ್ಷಣೆ ಹಾಗೂ ಅವುಗಳ ಸಂಖ್ಯೆಯ ಹೆಚ್ಚಳಕ್ಕೆ ಈಗಾಗಲೇ ಬಹಳಷ್ಟು ಕ್ರಮ ಕೈಗೊಳ್ಳಲಾಗಿದೆ’ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

2010 ರಲ್ಲಿ ಭಾರತದಲ್ಲಿ 1,706 ಹುಲಿಗಳು ಇದ್ದವು. ನಂತರದ ವರ್ಷಗಳಲ್ಲಿ ಹುಲಿ ಸಂಖ್ಯೆ ಏರಿಕೆಯಾಗಿವೆ. ಜಗತ್ತಿನಲ್ಲಿರುವ ಒಟ್ಟು ಹುಲಿಗಳ ಸಂಖ್ಯೆಯಲ್ಲಿ ಭಾರತ ಅಗ್ರ ಗಣ್ಯ ಸ್ಥಾನದಲ್ಲಿದೆ.

- Advertisement -

Related news

error: Content is protected !!