Tuesday, June 9, 2026
spot_imgspot_img
spot_imgspot_img

ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ

- Advertisement -
- Advertisement -

ಶ್ರೀನಗರ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಜಮ್ಮು-ಕಾಶ್ಮೀರದ ಗುರೆಜ್ ಸೆಕ್ಟರ್‌ನಲ್ಲಿ ಪತನಗೊಂಡಿದೆ.

ಚೀತಾ ಹೆಲಿಕಾಪ್ಟರ್, ಅಸ್ವಸ್ಥ ಬಿಎಸ್‌ಎಫ್ ಸಿಬ್ಬಂದಿಯನ್ನು ಕರೆದುಕೊಂಡು ಬರಲು ಹೊರಟಿತ್ತು. ಆದರೆ ಗುರೆಜ್ ಸೆಕ್ಟರ್ ನಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್ ನಲ್ಲಿ ಇದ್ದ ಇಬ್ಬರು ಪೈಲಟ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಹೆಲಿಕಾಪ್ಟರ್ ಇನ್ನೇನು ಲ್ಯಾಂಡ್ ಆಗಬೇಕಿತ್ತು. ಆದರೆ ಅಷ್ಟರಲ್ಲಿ ಪತನಗೊಂಡಿದೆ. ಹವಾಮಾನ ವೈಪರಿತ್ಯದಿಂದಾಗಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!