Tuesday, September 1, 2026
spot_imgspot_img
spot_imgspot_img

ಭಾರೀ ಮಳೆಯಿಂದ ಡೆಂಘೀ, ಚಿಕನ್ ಗುನ್ಯಾ ಹೆಚ್ಚಾಗುವ ಸಾಧ್ಯತೆ; ಸೂಕ್ತ ಕ್ರಮಕ್ಕೆ ಮುಂದಾದ ಆರೋಗ್ಯ ಇಲಾಖೆ

- Advertisement -
- Advertisement -

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲ ದಿನಗಳಿಂದ ಬಿಡದೆ ಸುರಿಯುತ್ತಿರುವ ಮಳೆಯಿಂದ ಡೆಂಘೀ ಮತ್ತು ಚಿಕನ್ ಗುನ್ಯಾ ಹೆಚ್ಚಾಗುವ ಸಂಭವವಿದ್ದು, ಕೂಡಲೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ವಿಶೇಷ ಆಯುಕ್ತರು(ಆರೋಗ್ಯ) ಡಾ. ತ್ರಿಲೋಕ್ ಚಂದ್ರ ರವರು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ನಿರಂತರ ಮಳೆ ಬೀಳುತ್ತಿರುವುದರಿಂದ ಡೆಂಘೀ ಮತ್ತು ಚಿಕನ್ ಗುನ್ಯಾ ಹೆಚ್ಚಾಗುವ ಸಂಬಂಧ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಳೆ ಬಂದಾಗ ನೀರು ಸಂಗ್ರಹವಾಗಿ ಸೊಳ್ಳೆಗಳ ಸಂತತಿ ಹೆಚ್ವಾಗುವುದನ್ನು ತಡೆಯಬೇಕು. ಹೂವಿನ ಕುಂಡ, ಬೀಸಾಕಿದ ಟೈರ್‌, ನೀರು ಸಂಗ್ರಹಿಸುವ ತೊಟ್ಟಿ, ಸಜ್ಜೆ, ನೀರಿನ ಬಾಟಲ್ ಸೇರಿದಂತೆ ಇನ್ನಿತರೆಡೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಈ ಸಂಬಂಧ ಅಂತಹ ಜಾಗದಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು ಎಂದರು.

ಮಳೆಗಾಲದಲ್ಲಿ ಡೆಂಘೀ ಮತ್ತು ಚಿಕನ್ ಗುನ್ಯಾ ಪ್ರಕರಣಗಳು ಹೆಚ್ಚಾಗಿ ಹರಡಲಿದ್ದು, ನೀರು ಸಂಗ್ರಹವಾಗುವ ಸ್ಥಳಗಳನ್ನು ಶುಚಿಗೊಳಿಸಿ ಸೊಳ್ಳೆ ಮೊಟ್ಟೆ ಇಡಲು ಅವಕಾಶವಿರದಂತೆ ನೋಡಿಕೊಳ್ಳಬೇಕು. ಈ ಸಂಬಂಧ ಸೊಳ್ಳೆ ತಾಣಗಳನ್ನು ಗುರುತಿಸಿ ನಾಶ ಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು.

ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗ ನಿಯಂತ್ರಣ ಕಾರ್ಯಕ್ರಮ ನಿರ್ದೇಶನಾಲಯ ಹಿರಿಯ ಪ್ರಾದೇಶಿಕ ನಿರ್ದೇಶಕರು ಡಾ. ರವಿಕುಮಾರ್ ಮಾತನಾಡಿ, ನಗರದಲ್ಲಿ ಡೆಂಘೀ ಮತ್ತು ಚಿಕನ್ ಗುನ್ಯಾ ಪ್ರಕರಣಗಳು ಹೆಚ್ಚಾಗುವ ಸಂಭವವಿದ್ದು, ಕೂಡಲೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಏಡಿಸ್ ಈಜಿಪ್ಟಿ ಸೊಳ್ಳೆಯಿಂದ ಡೆಂಗ್ಯೂ ಹರಡಲಿದ್ದು, ಪಾಲಿಕೆಯಿಂದ ಮನೆ-ಮನೆ ಬೇಟಿ ನೀಡಿ ನೀರು ಸಂಗ್ರಹವಿರುವ ಸ್ಥಳಗಳನ್ನು ಶುಚಿಯಾಗಿಟ್ಟುಕೊಳ್ಳಲು ತಿಳಿಸಬೇಕು ಎಂದರು.

ಹೆಚ್ಚು ದಿನಗಳ ಕಾಲ‌ ಸಂಗ್ರಹವಾದ ನೀರಿನಲ್ಲಿ ಸೊಳ್ಳೆಗಳ ತಾಣಗಳನ್ನು ಗುರುತಿಸಿ ಲಾರ್ವಾ ನಾಶಕ ಔಷಧಗಳಾದ ಲಾರ್ವಿಸೈಡಲ್ ಔಷಧಿ ಸಿಂಪಡಿಸಿ ಸೊಳ್ಳೆಗಳ ಉತ್ಪತ್ತಿಯನ್ನು ನಾಶಪಡಿಸಲು ಸೂಚಿಸಿದರು. ಜೊತೆಗೆ ಸೊಳ್ಳೆ ನಾಶಪಡಿಸಲು ನಿಯೋಜನೆಗೊಂಡಿರುವ ಸಿಬ್ಬಂದಿಗಳು ಆಯಾ ವಾರ್ಡ್ ಗಳಲ್ಲಿ ಸಂಚರಿಸಿ ಸೊಳ್ಳೆ ತಾಣಗಳನ್ನು ನಾಶಪಡಿಸುವ ಬಗ್ಗೆ ಜನಜಾಗೃತಿ ಮೂಡಿಸಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು. ಈ ಮೂಲಕ ಡೆಂಗ್ಯೂ ಖಾಯಿಲೆ ಹತೋಟಿಯಲ್ಲಿರಿಸಲು ಅಗತ್ಯ ಕ್ರಮ ಕೂಗೊಳ್ಳವೇಕು ಎಂದು ತಿಳಿಸಿದರು.

ಸಭೆಯಲ್ಲಿ ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್, ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗ ನಿಯಂತ್ರಣ ಕಾರ್ಯಕ್ರಮ ನಿರ್ದೇಶನಾಲಯ ಅಧಿಕಾರಿಗಳು, ಎಲ್ಲಾ ವಲಯ ಆರೋಗ್ಯಾಧಿಕಾರಿಗಳು, ಆರೋಗ್ಯ ವೈದ್ಯಾಧಿಕಾರಿಗಳು, ಸೋಂಕುಶಾಸ್ತ್ರಜ್ಞನರು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!