Saturday, May 18, 2024
spot_imgspot_img
spot_imgspot_img

ಭಿಕ್ಷುಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಬೀದಿ ಬದಿ ವ್ಯಾಪಾರಿ

- Advertisement -G L Acharya panikkar
- Advertisement -

ಚಿಕ್ಕಬಳ್ಳಾಪುರ: 40 ವರ್ಷದ ಭಿಕ್ಷುಕಿಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಘಟನೆ ಚಿಕ್ಕಾಬಳ್ಳಾಪುರದ ಮೀನು ಮಾಂಸ ಮಾರುಕಟ್ಟೆ ಬಳಿ ನಡೆದಿದೆ. ಬೀದಿ ಬದಿ ವ್ಯಾಪಾರಿ ಅಬ್ದುಲ್ಲಾ (24) ಎಂಬಾತ ಈ ಕೃತ್ಯ ಎಸಗಿದ್ದಾನೆ. ಅತ್ಯಾಚಾರ ಹಾಗೂ ಕೊಲೆಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಆರೋಪಿಯನ್ನು ಚಿಕ್ಕಬಳ್ಳಾಪುರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಅಬ್ದುಲ್ಲಾ ತಳ್ಳುಗಾಡಿಯಲ್ಲಿ ಮಸಾಲೆ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ. ಹಲವು ದಿನಗಳಿಂದ ಭಿಕ್ಷುಕಿ ಈ ಪ್ರದೇಶದಲ್ಲಿ ಇದ್ದರು. ಭಿಕ್ಷೆ ಬೇಡಿದ ನಂತರ ಇಲ್ಲಿಗೆ ಬಂದು ಮಲಗುತ್ತಿದ್ದರು. ಅತ್ಯಾಚಾರ ಹಾಗೂ ಕೊಲೆಯು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಭಿಕ್ಷುಕಿಯ ಹೆಸರು ಮತ್ತು ವಿಳಾಸ ಪತ್ತೆಯಾಗಿಲ್ಲ. ಪ್ರಕರಣ ಸಂಬ0ಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!