Saturday, May 11, 2024
spot_imgspot_img
spot_imgspot_img

ಭೀಕರ ಅಗ್ನಿ ದುರಂತ; 63 ಮಂದಿ ಸಾವು

- Advertisement -G L Acharya panikkar
- Advertisement -

5 ಅಂತಸ್ತಿನ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 63 ಮಂದಿ ಮೃತಪಟ್ಟಿದ ಘಟನೆ  ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದಿದೆ.

ಮಧ್ಯ ಜೋಹಾನ್ಸ್‌ಬರ್ಗ್‌ನ ಬಹುಮಹಡಿ ವಸತಿ ಕಟ್ಟಡದಲ್ಲಿ ಗುರುವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 63 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆಯೆಂದು ತುರ್ತು ನಿರ್ವಾಹಣಾ ಅಧಿಕಾರಿಗಳು ತಿಳಿಸಿದ್ದಾರೆ.

ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರಿಯುತ್ತಿದ್ದು , ಅಗ್ನಿಶಾಮಕ ದಳ ಹಾಗೂ ತುರ್ತು ವಾಹನಗಳು ಕಾರ್ಯಚರಣೆಯಲ್ಲಿ ತೊಡಗಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ .

ಸುಮಾರು 200 ಜನರು ಕಟ್ಟಡದಲ್ಲಿ ವಾಸವಿದ್ದರು, ಆದರೆ ಬೆಂಕಿ ಅನಾಹುತಕ್ಕೆ ಕಾರಣ ಹಾಗೂ ಹಾನಿಯ ಪ್ರಮಾಣ ಇನ್ನೂ ಎನೆಂದು ತಿಳಿದುಬಂದಿಲ್ಲ.

- Advertisement -

Related news

error: Content is protected !!