Friday, April 26, 2024
spot_imgspot_img
spot_imgspot_img

ಭೀಕರ ಅಪಘಾತ: ಶೈಕ್ಷಣಿಕ ಪ್ರವಾಸಕ್ಕೆ ಹೊರಟ ವಿದ್ಯಾರ್ಥಿಗಳು ಸೇರಿ 9ಜನ ದಾರುಣ ಸಾವು

- Advertisement -G L Acharya panikkar
- Advertisement -

ಕೇರಳ: ಭೀಕರ ಅಪಘಾತ ಸಂಭವಿಸಿ 9ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೇರಳದ ವಾಳಯಾರ್-ವಡಕ್ಕೆಂಚೇರಿ ರಾಷ್ಟ್ರೀಯ ಹೆದ್ದಾರಿಯ ಅಂಜುಮೂರ್ತಿ ಮಂಗಲಂ ಬಸ್ ನಿಲ್ದಾಣದ ಬಳಿ ನಡೆದಿದೆ

ಎರ್ನಾಕುಲಂನ ವಡಕ್ಕೆಂಚೇರಿಯಲ್ಲಿ ಮುಲಾಂತುರುತಿಯ ಬಸೆಲಿಯಸ್ ಶಾಲೆಯಿಂದ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಟೂರಿಸ್ಟ್ ಬಸ್ ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.

ಟೂರಿಸ್ಟ್ ಬಸ್ ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿದ್ದಾಗ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಈ ವೇಳೆ ಟೂರಿಸ್ಟ್ ಬಸ್ ನಿಯಂತ್ರಣ ತಪ್ಪಿ ಸಮೀಪದ ಜೌಗು ಪ್ರದೇಶಕ್ಕೆ ಉರುಳಿ ಬಿದ್ದಿದೆ. ಟೂರಿಸ್ಟ್ ಬಸ್‌ನಲ್ಲಿ 41 ವಿದ್ಯಾರ್ಥಿಗಳು, ಐವರು ಶಿಕ್ಷಕರು ಮತ್ತು ಬಸ್‌ನ ಇಬ್ಬರು ನೌಕರರಿದ್ದರು. ಕೆಎಸ್‌ಆ​ರ್​ಟಿಸಿ ಬಸ್​ನಲ್ಲಿ 49 ಜನ ಪ್ರಯಾಣಿಕರಿದ್ದರು.

ಮೃತರನ್ನು ಶಾಲಾ ಶಿಕ್ಷಕಿ ವಿಷ್ಣು ವಿಕೆ ಮತ್ತು ವಿದ್ಯಾರ್ಥಿಗಳಾದ ಅಂಜನಾ ಅಜಿತ್, ಇಮ್ಯಾನುಯೆಲ್ ಸಿಎಸ್, ದಿಯಾ ರಾಜೇಶ್, ಕ್ರಿಸ್ ವಿಂಟರ್‌ಬೋರ್ನ್ ಥಾಮಸ್, ಎಲ್ನಾ ಜೋಸ್ (ವಿದ್ಯಾರ್ಥಿಗಳು) ಮತ್ತು ಕೊಲ್ಲಂನ ವಲಿಯೋಡೆ ನಿವಾಸಿ ಅನೂಪ್ (22), ರೋಹಿತ್ ರಾಜ್ (24) ಮತ್ತು ದೀಪು (KSRTC ಪ್ರಯಾಣಿಕರು) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 12 ಮಂದಿ ತೀವ್ರವಾಗಿ ಗಾಯಗೊಂಡಿದ್ದು, 28 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬಸೆಲಿಯಸ್ ಶಾಲೆಯ 10, 11 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳು ಊಟಿಗೆ ಪ್ರವಾಸಕ್ಕೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.

astr
- Advertisement -

Related news

error: Content is protected !!