Friday, June 27, 2025
spot_imgspot_img
spot_imgspot_img

ಭೀಕರ ರಸ್ತೆ ಅಪಘಾತದಲ್ಲಿ ತಾಯಿ-ಮಗ ದುರಂತ ಅಂತ್ಯ

- Advertisement -
- Advertisement -

ರಾಯಚೂರು: ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತಾಯಿ-ಮಗ ದುರಂತ ಅಂತ್ಯ ಕಂಡಿದ್ದಾರೆ.

ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ತಾಯಿ ಮತ್ತು ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಬೈಕ್ ನಲ್ಲಿದ್ದ ತಾಯಿ ಭಾರತಿ(29) ಹಾಗೂ, ಮಗ ಉದಯ್ ಸಿಂಗ್ (11) ಮೃತ ದುರ್ವೈವಿಗಳು. ಇನ್ನು ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ತಾಯಿ ಮಗ ಲಿಂಗಸುಗೂರು ತಾಲ್ಲೂಕಿನ ಯರದೊಡ್ಡಿ ತಾಂಡಾದ ನಿವಾಸಿಗಳು ಎಂದು ತಿಳಿದುಬಂದಿದೆ. ಈ ಬಗ್ಗೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!