- Advertisement -
- Advertisement -

ಮಂಗಳೂರು: ನಾಳೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆ ಇಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಸಮಾವೇಶದ ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ಪರಿಶೀಲಿಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಧಾನಿ ಆಗಮನ ಹಿನ್ನೆಲೆ ಡಿಜಿಪಿ ಮತ್ತು ಎಡಿಜಿಪಿಯವರು ಇಂದು ಮಂಗಳೂರಿಗೆ ಆಗಮಿಸಲಿದ್ದು, ಅವರ ಸಂಪೂರ್ಣ ಭದ್ರತೆ ನೋಡಿಕೊಳ್ಳುತ್ತಾರೆ. ಇದರ ಜೊತೆಗೆ 100 ಉನ್ನತ ಅಧಿಕಾರಿಗಳು, 2000 ಸಾವಿರ ಸಿವಿಲ್ ಪೊಲೀಸ್ ಸೇರಿದಂತೆ ಕೆಎಸ್‌ಆರ್‌ಪಿ, ಸಿಎಆರ್, ಎಎನ್ಎಫ್, ಆರ್‌ಎಎಫ್, ಕೋಸ್ಟಲ್ ಸೆಕ್ಯೂರಿಟಿ, ಐಎಸ್ ಡಿ ಹಾಗೂ ಗರುಡ ಪಡೆ ಇರಲಿದೆ.
ಒಟ್ಟಾರೆ ಮೂರು ಸಾವಿರ ಪೊಲೀಸರ ಭದ್ರತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಸದ ನಳಿನ್ ಕುಮಾರ್, ಸಚಿವ ಸುನೀಲ್ ಕುಮಾರ್ ಉಸ್ತುವಾರಿ ನೋಡಲಿದ್ದಾರೆ ಎಂದು ಮಾಹಿತಿ ನೀಡಿದರು.

- Advertisement -








